ಸಾರಾಂಶ
‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಸಂಕಲ್ಪ - ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಕಾರ್ಯಕ್ರಮ ಅಲೆವೂರಿನ ಸುಭೋದಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ - 2025 ‘ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು’ ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ಜಿಲ್ಲಾ ಸಹಕಾರ ಇಲಾಖೆಗಳ ಸಹಯೋಗದೊಂದಿಗೆ ‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಸಂಕಲ್ಪ - ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಕಾರ್ಯಕ್ರಮ ಇಲ್ಲಿನ ಅಲೆವೂರಿನ ಸುಭೋದಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆಯಿತು.
ಅಲೆವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್ ಕುಮಾರ್ ಅಲೆವೂರು ಇವರು ಉದ್ಘಾಟಿಸಿ ಮಾತನಾಡಿ, ಈ ಕಾರ್ಯಕ್ರಮದ ಆಶಯದಂತೆ ನಿಮ್ಮ ನಿಮ್ಮ ಮನೆಯ ಆವರಣದಲ್ಲಿ ಗಿಡಗಳನ್ನು ಬೆಳೆಸಿ ಪೋಷಿಸಬೇಕು. ಮಕ್ಕಳಲ್ಲಿ ಸಣ್ಣ ವಯಸ್ಸಿನಲ್ಲೇ ಪರಿಸರದ ಬಗ್ಗೆ ಕಾಳಜಿ ಮೂಡಿದರೆ ನಮ್ಮ ನಾಡು ಹಚ್ಚಹಸಿರಾಗಿ ಯಾವಾಗಲೂ ಇರುತ್ತದೆ ಎಂದರು.ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ ಬಿ. ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಅಲೆವೂರು ಹರೀಶ್ ಕಿಣಿ, ಸುಭೋದಿನಿ ಶಾಲೆಯ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ, ಗೃಹ ನಿರ್ಮಾಣ ಸಹಕಾರ ಸಂಘದ ಉಪಾಧ್ಯಕ್ಷ ಎಲ್ ಉಮಾನಾಥ್, ನಿರ್ದೇಶಕರಾದ ರಾಧಾಕೃಷ್ಣ ಶೆಣೈ, ಗೋಪಾಲ ನಾಯ್ಕ, ದೇವದಾಸ್ ಯು., ರಂಜನಾ ಎಸ್. ಶೆಟ್ಟಿ, ಸುಜಾತ ಎಸ್. ಪ್ರಭು, ದಿನೇಶ್ ಕಿಣಿ, ದಾಮೋದರ್ ಎಂ. ಶೆಟ್ಟಿ ಇದ್ದರು.ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೃಹ ನಿರ್ಮಾಣ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಭಟ್ ಸ್ವಾಗತಿಸಿ, ವಂದಿಸಿದರು.