ನ್ಯಾಯವಾದಿ ಶಾಂತಾರಾಮ್ ಶೆಟ್ಟಿಗೆ ಅಲೆವೂರು ಗ್ರೂಪ್ ಅವಾರ್ಡ್

| Published : Dec 27 2023, 01:30 AM IST / Updated: Dec 27 2023, 01:31 AM IST

ನ್ಯಾಯವಾದಿ ಶಾಂತಾರಾಮ್ ಶೆಟ್ಟಿಗೆ ಅಲೆವೂರು ಗ್ರೂಪ್ ಅವಾರ್ಡ್
Share this Article
  • FB
  • TW
  • Linkdin
  • Email

ಸಾರಾಂಶ

ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 19ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಅವರಿಗೆ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

ಶನಿವಾರ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ 19ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಎಲ್ಐಸಿ ಆಫ್ ಇಂಡಿಯಾದ ಉಡುಪಿ ವಿಭಾಗದ ಹಿರಿಯ ವಿಭಾಗೀಯ ಪ್ರಬಂಧಕ ರಾಜೇಶ್ ವಿ. ಮುಧೋಳ್, ಶಾಂತಾರಾಮ್ ಶೆಟ್ಟಿ ಅವರಿಗೆ ಬೆಳ್ಳಿ ಫಲಕ ಸಹಿತ ಪ್ರಶಸ್ತಿ ಪ್ರದಾನ ಮಾಡಿದರು.

ಮುಖ್ಯ ಅತಿಥಿಯಾಗಿ ಉದ್ಯಮಿ ಕಾರ್ತಿಕ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಅಲೆವೂರು ಗಣಪತಿ ಕಿಣಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮಂಡಳಿ ಸದಸ್ಯೆ ಶಾಂತಾ ಕಿಣಿ, ನೀತಾ ಕಿಣಿ ಉಪಸ್ಥಿತರಿದ್ದರು.

ಅಲೆವೂರು ಗ್ರೂಪ್ ಕಾರ್ಯದರ್ಶಿ ಎ.ದಿನೇಶ್ ಕಿಣಿ ಸ್ವಾಗತಿಸಿದರು. ಪ್ರಾಂಶುಪಾಲೆ ರೂಪಾ ಡಿ.ಕಿಣಿ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಹರೀಶ್ ಕಿಣಿ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಶ್ರುತಿ ಗುರು ಮತ್ತು ಅನೀಶ್ ಕುಮಾರ್ರೂ ನಿರೂಪಿಸಿದರು.