ಸಾರಾಂಶ
ಚನ್ನಪಟ್ಟಣ: ಎಲ್ಲರೂ ಜೀವನದಲ್ಲಿ ಮಹಾನ್ ವ್ಯಕ್ತಿಗಳ ಆದರ್ಶ ಪಾಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ಕರೆ ನೀಡಿದರು.
ಚನ್ನಪಟ್ಟಣ: ಎಲ್ಲರೂ ಜೀವನದಲ್ಲಿ ಮಹಾನ್ ವ್ಯಕ್ತಿಗಳ ಆದರ್ಶ ಪಾಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ಕರೆ ನೀಡಿದರು.
ಇಲ್ಲಿನ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.ನನ್ನ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿ ಸರಳ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಇತರೆ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು ಎಂದರು.
ಸರಳ ಮತ್ತು ಸೌಜನ್ಯಯುತ ನಡವಳಿಕೆ ಹೊಂದಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ದೇಶದ ಪ್ರಗತಿಗೆ ಶ್ರಮಿಸಿದ್ದರು. ಈ ಮಹಾನ್ ವ್ಯಕ್ತಿಗಳು ನಮಗೆಲ್ಲ ದಾರಿದೀಪವಾಗಿದ್ದು, ಇವರ ತತ್ವಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಹೇಳಿದರು.ಸಮಾಜ ಸೇವಕರಾದ ನಿಸರ್ಗ ಲೋಕೇಶ್ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕರಾದ ಭಾರತಿ ಬಬಲೇಶ್ವರ, ಶಿಕ್ಷಣ ಸಂಯೋಜಕ ಗಂಗಾಧರ ಮೂರ್ತಿ, ಯೋಗೇಶ್ ಚಕ್ಕೆರೆ, ಕ್ಷೇತ್ರ ಸಮನ್ವಯಾಧಿಕಾರಿ ರಾಜಶೇಖರ್, ಬಿಇಒ ಕಚೇರಿಯ ವ್ಯವಸ್ಥಾಪಕ ಶಶಿಕುಮಾರ್, ಅಧೀಕ್ಷಕ ಪ್ರಶಾಂತ್ ಶರ್ಮ, ಕಚೇರಿಯ ವಿಷಯನಿರ್ವಾಹಕ ಚಂದ್ರೇಗೌಡ, ಮಂಜುನಾಥ, ಸಂಪತ್, ಕಾವ್ಯ, ಯೋಗಿತಾ, ಮಂಜುಳಾ , ಚೈತ್ರ ಇದ್ದರು.