ಕನ್ನಡಪ್ರಭ ವಾರ್ತೆ ವಿಜಯಪುರ ಮಾ.೨೧ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಾ.೨೧ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ನಗರದ ಕಂದಗಲ್ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ ನಡೆದ ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಪೂರ್ವ ಸಿದ್ಧತೆ, ಅನುಸರಣೆ ಹಾಗೂ ಅನುಷ್ಠಾನದ ಕುರಿತು ಪುನಶ್ಚೇತನ ಅವರು ಮಾತನಾಡಿದರು. ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ವಹಿಸಿಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಕುರಿತು ನಿರ್ದೇಶನ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದ್ದು, ಇದಕ್ಕೆ ಪೂರಕವಾಗಿ ಸಮರ್ಪಕ ಇಂಟರ್‌ನೆಟ್ ಹಾಗೂ ಯಾವುದೇ ತಾಂತ್ರಿಕ ಸಮಸ್ಯೆಗಳು ಉದ್ಭವಿಸದಂತೆ ಪರಿಹಾರ ಸೌಲಭ್ಯ ಕಲ್ಪಿಸಿರುವುದನ್ನು ಮೇಲಾಧಿಕಾರಿಗಳು ಮುಂಚೆಯೇ ಖಚಿತಪಡಿಸಿಕೊಳ್ಳಬೇಕು. ಪ್ರಿಸ್ಕಿಂಗ್ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಪರೀಕ್ಷಾ ದಿನಗಳಂದು ವೆಬ್‌ಕಾಸ್ಟಿಂಗ್ ಕಡ್ಡಾಯವಾಗಿರುವುದರಿಂದ ಅಳವಡಿಸಿರುವ ಸಿಸಿಟಿವಿ ಮುಂಚಿತವಾಗಿಯೇ ಪರಿಶೀಲನೆ ನಡೆಸಬೇಕು. ಹೈ ಸ್ಪೀಡ್ ಇಂಟರನೆಟ್ ಸೌಲಭ್ಯ ಕಲ್ಪಿಸಿರಬೇಕು. ಯಾವುದೇ ಗೊಂದಲಕ್ಕೆ ಒಳಗಾಗದೇ ಕಾರ್ಯನಿರ್ವಹಿಸಬೇಕು. ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ಮಿ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ತುರ್ತು ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಮಾಡಿಕೊಳ್ಳುವಂತೆ ತಿಳಿಸಿದರು.ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪುವಂತೆ ನೋಡಿಕೊಳ್ಳಿ. ಯಾವುದೇ ಸಮಸ್ಯೆಗಳು ಉದ್ಭವವಾದಲ್ಲಿ ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಪರೀಕ್ಷಾ ಮಾರ್ಗ ಸೂಚಿಗಳಂತೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಸಕ್ರೆಪ್ಪ ಬಿರಾದಾರ, ಜಿಲ್ಲಾ ನೋಡಲ್ ಅಧಿಕಾರಿ ಮಂಗಳಾ ನಾಯಕ, ಡಯಟ್‌ನ ಪ್ರಾಚಾರ್ಯ ಉಮಾದೇವಿ ಸೊನ್ನದ, ಶಿಕ್ಷಣಾಧಿಕಾರಿ ಅಶೋಕ ಲಿಮಕರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪರೀಕ್ಷೆಗೆ ನಿಯೋಜಿತ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕೋಟ್‌

ಮಾ.೨೧ ರಿಂದ ಏ.೪ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲೆಯಲ್ಲಿ ೨೨,೯೦೮ ಬಾಲಕರು ೨೦,೧೬೮ ಬಾಲಕಿಯರು ಸೇರಿದಂತೆ ಒಟ್ಟು ೪೩,೦೭೬ ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. ೧೩೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಟಿ.ಎಸ್.ಕೋಲಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ