ಸರ್ಕಾರಿ ಕಾಲೇಜಿಗೂ ಸಕಲ ಸೌಲಭ್ಯ: ಶಿವಗಂಗಾ ಭರವಸೆ

| Published : Oct 29 2025, 01:00 AM IST

ಸಾರಾಂಶ

ಸರ್ಕಾರಿ ಕಾಲೇಜಿನಲ್ಲಿ ಕಲಿಯುವ ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು, ಖಾಸಗಿ ಕಾಲೇಜಿನಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ನಮ್ಮ ಸರ್ಕಾರಿ ಕಾಲೇಜಿನಲ್ಲಿಯೂ ದೊರೆಯುವಂತೆ ಮಾಡುವುದು ನನ್ನ ಉದ್ದೇಶವಾಗಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

- ಚನ್ನಗಿರಿಯಲ್ಲಿ ಎಸ್ಎಸ್ಎಸ್ ಸರ್ಕಾರಿ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳಿಗೆ ಚಾಲನೆ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ಸರ್ಕಾರಿ ಕಾಲೇಜಿನಲ್ಲಿ ಕಲಿಯುವ ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು, ಖಾಸಗಿ ಕಾಲೇಜಿನಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ನಮ್ಮ ಸರ್ಕಾರಿ ಕಾಲೇಜಿನಲ್ಲಿಯೂ ದೊರೆಯುವಂತೆ ಮಾಡುವುದು ನನ್ನ ಉದ್ದೇಶವಾಗಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಮಂಗಳವಾರ ಪಟ್ಟಣದ ಎಸ್.ಎಸ್.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಯುವ ರೆಡ್ ಕ್ರಾಸ್ ಹಾಗೂ ರೋವರ್ಸ್‌ ಮತ್ತು ರೇಂಜರ್ಸ್ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಪಿಯುಸಿ ಶಿಕ್ಷಣ ಮುಗಿಸಿ ಪದವಿ ಪಡೆಯಲು ವಿದ್ಯಾರ್ಥಿಗಳು ಹಲವಾರು ಕನಸುಗಳನ್ನು ಹೊತ್ತು ಈ ಸರ್ಕಾರಿ ಕಾಲೇಜಿಗೆ ಬಂದಿರುತ್ತಾರೆ. ಅವರ ಶೈಕ್ಷಣಿಕ ಪ್ರಗತಿಗೆ ಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ಕೊಡಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಕೊಠಡಿಗಳ ನಿರ್ಮಾಣಕ್ಕೆ ₹2.5 ಕೋಟಿ, ಬಿಸಿಎ ಬ್ಲಾಕ್ ನಿರ್ಮಾಣಕ್ಕೆ ₹1.3 ಕೋಟಿ, ಆಡಿಟೋರಿಯಂ ನವೀಕರಣಕ್ಕೆ ₹90 ಲಕ್ಷವನ್ನು ಈಗಾಗಲೇ ಬಿಡುಗಡೆ ಮಾಡಿದ್ದೇನೆ ಎಂದರು.

ವಿದ್ಯಾರ್ಥಿಗಳ ತಂದೆ, ತಾಯಿ ಕಷ್ಟಪಟ್ಟು ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಅಭ್ಯಾಸ ನಡೆಸಬೇಕು. ಶಿಸ್ತು, ಸಮಯಪ್ರಜ್ಞೆ ಮೈಗೂಡಿಸಿಕೊಂಡಾಗ ಜೀವನದಲ್ಲಿ ಉನ್ನತ ಸ್ಥಾನ ಪಡೆಯುತ್ತೀರಿ ಎಂದು ಸಲಹೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಬಿ.ಜಿ. ಅಮೃತೇಶ್ವರ ವಹಿಸಿದ್ದರು. ಇದೇ ಸಂದರ್ಭದಲ್ಲಿ 2024-25ನೇ ಸಾಲಿನ ಕಾಲೇಜಿನ ಶೈಕ್ಷಣಿಕ ವಾರ್ಷಿಕ ಸಂಚಿಕೆ ಬಿಡುಗಡೆಗೊಳಿಸಲಾಯಿತು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ್ ನಾಡಿಗ್, ಗಾಯಕ ಶಶಿಕಿರಣ್, ಐಕ್ಯೂಎಸಿ ಸಂಯೋಜಕ ಸುರೇಶ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿ.ವೈ. ರವಿಕುಮಾರ್, ಲಿಯಾಕತ್ ಅಲಿ, ಜಿ.ಆರ್. ಭೈರೇಶ್, ಚಂದ್ರಶೇಖರ್ ಬಾಬು, ಜೆ.ಜ್ಯೋತಿಪ್ರಸಾದ್, ಎಂ.ಆರ್. ಶಿವರಾಜ್, ಜ್ಯೋತಿ ಕೋರಿ, ಸಿ.ರಮೇಶ್, ಎಸ್.ಎಸ್. ಮಧುಕುಮಾರ್, ಸುರೇಶ್, ದೈಹಿಕ ನಿರ್ದೇಶಕ ಕಲ್ಲೇಶಪ್ಪ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

- - -

(ಕೋಟ್‌) ವಿದ್ಯಾರ್ಥಿಗಳು ಮೊದಲು ತಮ್ಮ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ, ಗುರು- ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು. ನಿಮ್ಮ ಶೈಕ್ಷಣಿಕ ಜೀವನದಲ್ಲಿ ಪಡೆಯುವ ಅಂಕಗಳು ಕಡಿಮೆಯಾದರೂ ಪರವಾಗಿಲ್ಲ, ಉತ್ತಮ ಸಂಸ್ಕಾರ ರೂಢಿಸಿಕೊಳ್ಳಬೇಕು.

- ಡಾ.ರಾಹುಲ್‌ ದೇವರಾಜ್‌, ಸಮಾಜ ಸೇವಕ, ಶಿವಮೊಗ್ಗ.

- - -

-28ಕೆಸಿಎನ್‌ಜಿ1.ಜೆಪಿಜಿ:

ಚನ್ನಗಿರಿ ಪಟ್ಟಣದ ಎಸ್.ಎಸ್.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಯುವ ರೆಡ್ ಕ್ರಾಸ್ ಹಾಗೂ ರೋವರ್ಸ್‌ ಮತ್ತು ರೇಂಜರ್ಸ್ ಚಟುವಟಿಕೆಗಳಿಗೆ ಶಾಸಕ ಬಸವರಾಜು ವಿ.ಶಿವಗಂಗಾ ಚಾಲನೆ ನೀಡಿದರು.