ನ.19ರಂದು ಅಖಿಲ ಭಾರತ ಸಹಕಾರ ಸಪ್ತಾಹ: ಸಿ.ಶಿವಕುಮಾರ್

| Published : Nov 18 2025, 12:30 AM IST

ಸಾರಾಂಶ

ಸಹಕಾರ ಸಪ್ತಾಹವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ ಘನ ಉಪಸ್ಥಿತಿ ವಹಿಸುವರು. ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಚಿನಕುರಳಿ ಗ್ರಾಮದ ಶ್ರೀಜಯಮ್ಮ ಕಾಳೇಗೌಡ ಸಮುದಾಯ ಭವನದಲ್ಲಿ ನ.19ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಚಿನಕುರಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘಗಳ ಆಶ್ರಯದಲ್ಲಿ ಸಹಕಾರ ಸಪ್ತಾಹ ನಡೆಯಲಿದೆ ಎಂದರು.

ಸಹಕಾರ ಸಪ್ತಾಹವನ್ನು ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ ಘನ ಉಪಸ್ಥಿತಿ ವಹಿಸುವರು. ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಅಧ್ಯಕ್ಷತೆವಹಿಸಲಿದ್ದಾರೆ. ಚಿನಕುರಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಾಧ್ಯಾಪಕ ಡಾ.ಕೆಂಪೇಗೌಡ ಉಪನ್ಯಾಸ ನೀಡಲಿದ್ದಾರೆ ಎಂದರು.

ಜಿಲ್ಲಾ ಸಹಕಾರ ಒಕ್ಕೂಟದ ವಿಶೇಷಾಧಿಕಾರಿ ಕೆ.ಅನಿತಾ, ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಎಸ್.ಎಲ್.ಮೋಹನ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಸಿ.ಪುಟ್ಟಸ್ವಾಮೀಗೌಡ, ಎ.ವಿಜಯೇಂದ್ರಮೂರ್ತಿ, ಆರ್.ಎ.ನಾಗಣ್ಣ, ಎಚ್.ಕೆ.ಕೃಷ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಗಿರೀಶ್, ಎಚ್.ಪಿ.ಚಲುವೇಗೌಡ, ಜಿ.ಕೆ.ಶಿವಕುಮಾರ್, ಶಿವಪ್ಪ ಸೇರಿದಂತೆ ಸಂಘ-ಸಂಸ್ಥೆಗಳು ನಿರ್ದೇಶಕ, ಸದಸ್ಯರು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಸಿ.ಪುಟ್ಟಸ್ವಾಮೀಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಾಡೆ ಗಿರೀಶ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಲುವೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ವಿ.ಎಸ್.ನಿಂಗೇಗೌಡ, ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ, ಎಆರ್ ನಿರ್ಮಲಾ, ಮನ್ಮುಲ್ ಉಪವ್ಯಸ್ಥಾಪಕ ಆರ್.ಪ್ರಸಾದ್ ಸೇರಿದಂತೆ ಹಲವರು ಹಾಜರಿದ್ದರು.