ಇಂದು, ನಾಳೆ ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ

| Published : Jan 18 2025, 12:46 AM IST

ಇಂದು, ನಾಳೆ ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಚಿತ್ರದುರ್ಗದಲ್ಲಿ ಜ.18 ಮತ್ತು 19ರಂದು ಅಖಿಲ ಭಾರತ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಬೆಲ್ದಾಳ ಸಿದ್ದರಾಮ ಶರಣರ ಸರ್ವಾಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಡಾ. ಬೆಲ್ದಾಳ ಸಿದ್ದರಾಮ ಸರ್ವಾಧ್ಯಕ್ಷತೆ । ಜಿಲ್ಲಾ ಪರಿಷತ್ತು ಅಧ್ಯಕ್ಷ ಕೆ.ಬಿ.ಪರಮೇಶ್ವರಪ್ಪ ಮಾಹಿತಿ

- - - ಕನ್ನಡಪ್ರಭ ವಾರ್ತೆ ದಾವಣಗೆರೆ ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಚಿತ್ರದುರ್ಗದಲ್ಲಿ ಜ.18 ಮತ್ತು 19ರಂದು ಅಖಿಲ ಭಾರತ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಬೆಲ್ದಾಳ ಸಿದ್ದರಾಮ ಶರಣರ ಸರ್ವಾಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.18ರಂದು ಬೆಳಗ್ಗೆ 8.30 ಗಂಟೆಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಶ್ರೀ ತೋಂಟದ ಸಿದ್ಧರಾಮ ಸ್ವಾಮಿಗಳು ಹಾಗೂ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಮುರುಘರಾಜೇಂದ್ರ ಬೃಹನ್ಮಠದ ಅಧ್ಯಕ್ಷ ಶಿವಯೋಗಿ ಕಳಸದ ಧ್ವಜಾರೋಹಣ ನೆರವೇರಿಸುವರು. ಪರಿಷತ್ತಿನ ಧ್ವಜಾರೋಹಣವನ್ನು ಡಾ.ಸಿ.ಸೋಮಶೇಖರ ನೆರವೇರಿಸುವರು ಎಂದರು.

9.45 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿ-50 ರಿಂದ ಆರಂಭವಾಗಿ ವೇದಿಕೆ ತಲುಪಲಿದೆ. ಸಮ್ಮೇಳನಾಧ್ಯಕ್ಷ ಡಾ.ಸಿದ್ದರಾಮ ಬೆಲ್ದಾಳ ಶರಣರು, ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ಪ್ರಸನ್ನಾನಂದ ಸ್ವಾಮೀಜಿ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಚಾಲನೆ ನೀಡಲಿದ್ದಾರೆ ಎಂದರು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ತೋಂಟದ ಸಿದ್ಧರಾಮ ಸ್ವಾಮೀಜಿ, ಇಮ್ಮಡಿ ಸಿದ್ಧರಾಮ ಶ್ರೀ, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ, ಶಿವಲಿಂಗಾನಂದ ಶ್ರೀ, ಡಾ.ಬಸವಕುಮಾರ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ಎಸ್.ಆರ್. ಗುಂಜಾಳ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವರಾದ ಎಂ.ಬಿ. ಪಾಟೀಲ್, ಡಿ.ಸುಧಾಕರ್, ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಗೋವಿಂದ ಕಾರಜೋಳ, ಬಿ.ವೈ.ರಾಘವೇಂದ್ರ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಶಾಸಕ ಎನ್.ವೈ. ಗೋಪಾಲಕೃಷ್ಣ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಗೋಷ್ಠಿಗಳು ನಡೆಯಲಿವೆ ಎಂದು ತಿಳಿಸಿದರು.

ಸಮಾರೋಪ:

ಜ.19ರಂದು ಸಂಜೆ 6 ಗಂಟೆಗೆ ನಡೆಯುವ ಸಮಾರೋಪದ ಸಾನ್ನಿಧ್ಯವನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಶ್ರೀ ಗುರುಮಹಾಂತ ಸ್ವಾಮೀಜಿ, ಶ್ರೀ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ, ಸಂಸದ ಬಸವರಾಜ ಎಸ್. ಬೊಮ್ಮಾಯಿ, ಡಾ. ಎಂ.ಪ್ರಭಾಕರ್ ಕೋರೆ, ನ್ಯಾ. ಡಾ.ಶಿವರಾಜ್ ವಿ. ಪಾಟೀಲ್ ಭಾಗವಹಿಸಲಿದ್ದಾರೆ. ಡಾ.ಸಿದ್ಧರಾಮ ಬೆಲ್ದಾಳ ಶರಣರು ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡುವರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಹಿತ್ಯಾಸಕ್ತರು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಭರ್ಮಪ್ಪ ಮೈಸೂರು (9900369585) ಅವರನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪರಿಷತ್ತಿನ ಎಚ್.ಕೆ. ಲಿಂಗಾರಾಜ್, ಮೈಸೂರು ಭರ್ಮಪ್ಪ, ಎನ್.ಎಸ್. ರಾಜು ಇದ್ದರು.

- - - -17ಕೆಡಿವಿಜಿ31:

ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸಿರುವ ಕುರಿತು ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಕೆ.ಬಿ.ಪರಮೇಶ್ವರಪ್ಪ ಮಾಹಿತಿ ನೀಡಿದರು.