ಚಿಕ್ಕಮಗಳೂರು: ಹಿಂದುಳಿದ ಸಮುದಾಯವಾದ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಒತ್ತಾಯಿಸಿ ಮಾ.16 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಡಿವಾಳ ರಾಜ್ಯ ಸಮಿತಿ ನಿರ್ದೇಶಕ ರವಿ ಕುಮಾರ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2009ರಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಮಡಿವಾಳ ಸಮೂದಾಯವನ್ನು ಎಸ್‌ಟಿಗೆ ಸೇರಿಸುವ ಕುರಿತು ವರದಿ ನೀಡುವಂತೆ ಅನ್ನ ಪೂರ್ಣೇಶ್ವರಿ ನೇತೃತ್ವದ ಸಮಿತಿ ರಚಿಸಲಾಗಿತ್ತು. ಸಮಿತಿವರದಿ ನೀಡಿ ಎಸ್‌ಟಿಗೆ ಸೇರಿಸುವುದಕ್ಕೆ ಶಿಫಾರಸ್ಸು ಸಹ ಮಾಡಲಾಗಿತ್ತು. ಆ ಬಳಿಕ ಅಧಿಕಾರಕ್ಕೆ ಬಂದ ಸರ್ಕಾರಗಳು ಈ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಹಲವು ಬಾರಿ ಮಡಿವಾಳ ಜನಾಂಗವನ್ನು ಎಸ್‌ಟಿಗೆ ಸೇರಿಸುವುದಕ್ಕೆ ಸಂಪುಟ ಸಭೆಗೆ ವಿಷಯ ಹೋದರೂ ವಾಪಾಸ್ ಕಳುಹಿಸುವ ಕೆಲಸ ಆಗುತ್ತಿದೆ ಎಂದರು.ನೆರೆಯ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ದೇಶದ 17 ರಾಜ್ಯ ಹಾಗೂ ಮೂರು ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳರನ್ನು ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ರಾಜ್ಯದಲ್ಲಿ ಮಾತ್ರ ಸೇರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೋರಾಟ ಹಮ್ಮಿ ಕೊಳ್ಳಲಾಗಿದೆ. ಜಿಲ್ಲೆಯ ಸಮುದಾಯದವರು ಹೆಚ್ಚಿನ ಸಂಖ್ಯೆ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಈ ವೇಳೆ ಜಿಲ್ಲಾ ಮಡಿವಾಳ ಸಂಘದ ಪ್ರಧಾನ ಕಾರ್ಯದರ್ಶಿ ಎಸ್,ವಿ.ರಾಮಚಂದ್ರ, ಸಮುದಾಯದ ಮುಖಂಡರಾದ ಮಂಜುನಾಥ್, ಸತೀಶ್ ಮೊದಲಾದವರಿದ್ದರು.