ಸಾರಾಂಶ
ವಿಜಯನಗರ ಸಾಮ್ರಾಜ್ಯದ ತೊಟ್ಟಿಲು, ಮೊದಲ ರಾಜಧಾನಿ ಆನೆಗೊಂದಿಯಲ್ಲಿ ಇದೇ ಮಾ.11, 12ರಂದು ಐತಿಹಾಸಿಕ ಆನೆಗೊಂದಿ ಉತ್ಸವ ನಡೆಯಲಿದೆ.
ಕೊಪ್ಪಳ: ಆನೆಗೊಂದಿ ಉತ್ಸವಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.ಆನೆಗೊಂದಿ ಉತ್ಸವ ಹಿನ್ನೆಲೆಯಲ್ಲಿ ಶನಿವಾರ ಆನೆಗೊಂದಿಯಲ್ಲಿ ವೇದಿಕೆ ಸೇರಿದಂತೆ ಇತರ ಸಿದ್ಧತೆಗಳನ್ನು ಪರಿಶೀಲಿಸಿ, ಬಳಿಕ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ತೊಟ್ಟಿಲು, ಮೊದಲ ರಾಜಧಾನಿ ಆನೆಗೊಂದಿಯಲ್ಲಿ ಇದೇ ಮಾ.11, 12ರಂದು ಐತಿಹಾಸಿಕ ಆನೆಗೊಂದಿ ಉತ್ಸವ ನಡೆಯಲಿದೆ. ಉತ್ಸವದ ಉದ್ಘಾಟನೆಗೆ ಸಿಎಂ, ಡಿಸಿಎಂ, ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದರು.ಗಂಗಾವತಿ ತಹಶೀಲ್ದಾರ ಯು.ನಾಗರಾಜ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.ಸಿದ್ಧತೆ ಪರಿಶೀಲನೆ: ಆನೆಗೊಂದಿ ಉತ್ಸವದ ಸಿದ್ಧತೆಗಳನ್ನು ಶಾಸಕ ಜನಾರ್ದನ ರೆಡ್ಡಿ ಪರಿಶೀಲಿಸಿದರು. ಉತ್ಸವದ ಮುಖ್ಯ ವೇದಿಕೆ, ಮಾಧ್ಯಮದ ಗ್ಯಾಲರಿ, ಗಣ್ಯರು, ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸಿದ್ಧತೆಗಳ ವೀಕ್ಷಿಸಿದರು.