ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಕಲ ಸಿದ್ಧತೆ: ನಾಯ್ಕ

| Published : Oct 18 2025, 02:02 AM IST

ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಕಲ ಸಿದ್ಧತೆ: ನಾಯ್ಕ
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಬಿ.ಕೆ. ಮಾಡೆಲ್‌ ಸ್ಕೂಲ್‌ನಲ್ಲಿ ಮತದಾನ ನಡೆಯಲಿದ್ದು, 7 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಡಿಸಿಸಿ)ನ 7 ನಿರ್ದೇಶಕರ ಸ್ಥಾನಗಳಿಗೆ ಅ.19 ರಂದು ನಡೆಯುವ ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಯೂ ಆಗಿರುವ ಉಪ ವಿಭಾಗಾಧಿಕಾರಿ ಶ್ರವಣ ನಾಯ್ಕ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಬಿ.ಕೆ. ಮಾಡೆಲ್‌ ಸ್ಕೂಲ್‌ನಲ್ಲಿ ಮತದಾನ ನಡೆಯಲಿದ್ದು, 7 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಬಳಿಕ ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದರು.

7 ಕ್ಷೇತ್ರಗಳಲ್ಲಿ 14 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಥಣಿ 125, ಬೈಲಹೊಂಗಲ 73, ಹುಕ್ಕೇರಿ 90, ಕಿತ್ತೂರು 29, ನಿಪ್ಪಾಣಿ 119, ರಾಯಬಾಗ 205, ರಾಮದುರ್ಗ 35 ಹೀಗೆ ಒಟ್ಟು 676 ಅರ್ಹ ಮತದಾರರಿದ್ದಾರೆ. ಮತದಾನ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಚುನಾವಣಾ ಕಾರ್ಯಕ್ಕೆ 33 ಸಿಬ್ಬಂದಿ ನಿಯೋಜಿಸಲಾಗಿದೆ. ಬಿಗಿ ಭದ್ರತೆ ಕಲ್ಪಿಸಲಾಗಿದೆ. ಚುನಾವಣಾ ಸಿಬ್ಬಂದಿ, ಪೊಲೀಸರು ಮತ್ತು ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್‌ ಬಳಕೆ ನಿಷೇಧಿಸಲಾಗಿದೆ. ಪೆನ್ನು, ಪೆನ್ಸಿಲ್‌ನ್ನು ಕೂಡ ಯಾರೂ ತರುವಂತಿಲ್ಲ ಎಂದರು.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಪತ್ರಕರ್ತರಿಗೆ ಮತದಾನ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಒಬ್ಬ ಅಭ್ಯರ್ಥಿಗೆ ಒಬ್ಬ ಏಜೆಂಟರ್‌ನ್ನು ನೇಮಿಸುವ ಅವಕಾಶ ಕಲ್ಪಿಸಲಾಗಿದೆ. ಗುಪ್ತ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದರು. ಕಿತ್ತೂರಿನಲ್ಲಿ ಮತದಾರ ಪಟ್ಟಿಯಲ್ಲಿ ಕೆಲವು ಹೆಸರು ಕಾಣೆಯಾಗಿರುವ ಪ್ರಕರಣದ ಕುರಿತು ನ್ಯಾಯಾಲಯದಿಂದ ತಮಗೆ ಯಾವುದೇ ಮಾಹಿತಿ ಬಂದಿಲ್ಲ. ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಸಮ ಪ್ರಮಾಣದ ಮತಗಳು ಬಿದ್ದ ಪಕ್ಷದಲ್ಲಿ ಚೀಟಿ ಎತ್ತುವ ಮೂಲಕ ಫಲಿತಾಂಶ ಪ್ರಕಟಿಸಲಾಗುವುದು ಎಂದರು.