ಸಾರಾಂಶ
ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಆ.20ರಂದು ಬೆಳಗ್ಗೆ 11ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಆ.20ರಂದು ಬೆಳಗ್ಗೆ 11ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕುರಿತು ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೂ ಮುಂಚೆ ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ರಾಣಿ ಚನ್ನಮ್ಮ ವೃತ್ತದ, ಅಂಬೇಡ್ಕರ್ ರಸ್ತೆ, ಕೃಷ್ಣದೇವರಾಯ ಸರ್ಕಲ್ ಮಾರ್ಗವಾಗಿ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಅದೇ ರೀತಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಡಿ.ದೇವರಾಜ ಅರಸು ಅವರ ಕುರಿತು ಮಾಹಿತಿ ಇರುವ ನುರಿತ ಪ್ರಾಧ್ಯಾಪಕರಿಂದ ಉಪನ್ಯಾಸ ಏರ್ಪಡಿಸಬೇಕು ಎಂದರು. ಪ್ರಬಂಧ ಸ್ಪರ್ಧೆ:
ಜಿಲ್ಲಾಮಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳ ಪ್ರಬಂಧ ಸ್ಪರ್ಧೆ, ವಿದ್ಯಾರ್ಥಿ ನಿಲಯಗಳ ಮಕ್ಕಳಿಗೆ ಯೋಗ ಹಾಗೂ ವಿವಿಧ ಕ್ರೀಡೆಗಳ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ತಿಳಿಸಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹರ್ಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.