ಆ. 15ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸುವ ಹಿನ್ನೆಲೆ ತಾಪಂ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಲಕ್ಷ್ಮೇಶ್ವರ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ ಜಿ ರಾಮ್ ಜಿ ಯೋಜನೆಯಡಿ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಆ. 15ರಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ತಿಳಿಸಿದರು.ತಾಪಂ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆ. 15ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸುವ ಹಿನ್ನೆಲೆ ತಾಪಂ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಾಮೀಣ ಕುಟುಂಬಗಳಿಗೆ ಕೆಲಸದ ಭದ್ರತೆ ಕಲ್ಪಿಸುವುದರ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವ ದಿನಗಳ ಸೃಜನೆಗೆ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.ವಿಬಿಜಿ ರಾಮ್ ಜಿ ಯೋಜನೆಯ ಸಹಾಯಕ ನಿರ್ದೇಶಕ(ಗ್ರಾಮೀಣ ಉದ್ಯೋಗ) ಧರ್ಮರ ಕೃಷ್ಣಪ್ಪ ಮಾತನಾಡಿ, ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರಿಶೀಲಿಸುವುದು, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್ ಮಾಡಿಸಿಕೊಡುವುದು, ಜಾಬ್ ಕಾರ್ಡ್ ನವೀಕರಣ ಹಾಗೂ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಸೇರಿದಂತೆ ಉದ್ಯೋಗದ ಬೇಡಿಕೆಯನ್ನು ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ ಎಂದರು.ಇಂದಿನಿಂದ ಜಾಬ್ ಕಾರ್ಡ್ ಅಭಿಯಾನ
ನರಗುಂದ: ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ ವಿಬಿ ಜಿ ರಾಮ್-ಜಿ ಯೋಜನೆಯಡಿ ತಾಲೂಕಿನ 13 ಗ್ರಾಮ ಪಂಚಾಯಿತಿಗಳಲ್ಲಿ ಆ. 15ರಿಂದ ಸೆ. 15ರ ವರೆಗೆ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ತಿಳಿಸಿದರು.ಸ್ಥಳೀಯ ತಾಪಂ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರಿಗೆ ಯೋಜನೆಯಡಿ ಉದ್ಯೋಗ ಕಲ್ಪಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಅದರಂತೆ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳ ಮಾಹಿತಿಯನ್ನು ಪರಿಶೀಲಿಸಿ, ಅಗತ್ಯವಿರುವವರಿಗೆ ಹೊಸ ಜಾಬ್ ಕಾರ್ಡ್ ವಿತರಿಸಬೇಕು. ಜಾಬ್ ಕಾರ್ಡ್ ನವೀಕರಣ, ಇ- ಕೆವೈಸಿ ಪೂರ್ಣಗೊಳಿಸುವಿಕೆ ಹಾಗೂ ಉದ್ಯೋಗದ ಬೇಡಿಕೆ ಸ್ವೀಕರಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಕುಟುಂಬಗಳಿಗೆ ನಿಯಮಾನುಸಾರ ಸ್ವೀಕೃತಿ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ- ಮನೆ ಭೇಟಿ ಮೂಲಕ ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಗ್ರಾಮಸಭೆ, ಜಾಗೃತಿ ಸಭೆಗಳನ್ನು ನಡೆಸುವುದರ ಜತೆಗೆ ಪೋಸ್ಟರ್, ಬ್ಯಾನರ್‌ಗಳ ಮೂಲಕ ಜಾಬ್ ಕಾರ್ಡ್ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.ಜಾಬ್ ಕಾರ್ಡ್ ಇಲ್ಲದ ಕೂಲಿ ಕಾರ್ಮಿಕರು ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ಕೂಲಿ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದರೆ, ನಿಯಮಾನುಸಾರ ಅರ್ಜಿ ಸಲ್ಲಿಸಿದ ದಿನವೇ ಜಾಬ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ತಾಲೂಕಿನ ಎಲ್ಲ 13 ಗ್ರಾಮ ಪಂಚಾಯಿತಿಗಳ ಕೂಲಿ ಕಾರ್ಮಿಕರು ಜಾಬ್ ಕಾರ್ಡ್ ಮೇಳದ ಪ್ರಯೋಜನ ಪಡೆದುಕೊಂಡು ವಿಬಿ ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ಪಡೆಯಬೇಕು ಎಂದು ಮನವಿ ಮಾಡಿದರು.14ಜಿಡಿಜಿ12