ಸಾರಾಂಶ
ಕನ್ನಡಪ್ರಭ ವಾರ್ತೆ ಅಥಣಿಪ್ರವಾಹ ಸಂಭವಿಸಬಹುದಾದ ಹುಲಗಬಾಳ, ತೀರ್ಥ, ಸಪ್ತಸಾಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ವಾಣಿ.ಯು ನೇತೃತ್ವದ ತಾಲೂಕ ಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಪಾಯದ ಸ್ಥಿತಿಯಲ್ಲಿರುವ ಗ್ರಾಮಗಳ ನಿವಾಸಿಗಳಿಗೆ ಮತ್ತು ತೋಟದ ವಸತಿಯ ಜನರಿಗೆ ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಅಥಣಿ
ಪ್ರವಾಹ ಸಂಭವಿಸಬಹುದಾದ ಹುಲಗಬಾಳ, ತೀರ್ಥ, ಸಪ್ತಸಾಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ವಾಣಿ.ಯು ನೇತೃತ್ವದ ತಾಲೂಕ ಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಪಾಯದ ಸ್ಥಿತಿಯಲ್ಲಿರುವ ಗ್ರಾಮಗಳ ನಿವಾಸಿಗಳಿಗೆ ಮತ್ತು ತೋಟದ ವಸತಿಯ ಜನರಿಗೆ ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ತಾಪಂ ಇಒ ಶಿವಾನಂದ ಕಲ್ಲಾಪೂರ, ಸಿಪಿಐ ರವೀಂದ ನಾಯ್ಕೋಡಿ, ಪಿಎಸ್ಐ ಶಿವಾನಂದ ಕಾರಜೋಳ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
---------------------------------------ಕೋಟ್....
ಸದ್ಯಕ್ಕೆ ಕೃಷ್ಣಾ ನದಿಯ ಒಳ ಹರಿವು ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳಲ್ಲಿ ನೆರೆ ಭೀತಿ ಉಂಟಾಗಿದೆ. ಹಿಪ್ಪರಗಿ ಜಲಾಶಯದಿಂದ 1.50 ಲಕ್ಷ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಹಲ್ಯಾಳ, ದರೂರ ಸೇತುವೆ ಮುಳುಗುವ ಹಂತದಲ್ಲಿದೆ. ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ತಾಲೂಕಾಡಳಿತ ಪೂರ್ಣ ಸಿದ್ದತೆ ಮಾಡಿಕೊಂಡಿದೆ. ಅಗತ್ಯ ಕಡೆಗಳಲ್ಲಿ ಕಾಳಜಿ ಕೇಂದ್ರ, ದೋಣಿ, ಲೈಪ್ ಜಾಕೆಟ್‌ಗಳು ಸೇರಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.ವಾಣಿ.ಯು, ತಹಸೀಲ್ದಾರ್
------------------