ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಸ್ವಾಗತಕ್ಕೆ ಸಕಲ ಸಿದ್ಧತೆ: ಡಿ.ಸಿ.ತಮ್ಮಣ್ಣ

| Published : Jun 15 2024, 01:11 AM IST

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಸ್ವಾಗತಕ್ಕೆ ಸಕಲ ಸಿದ್ಧತೆ: ಡಿ.ಸಿ.ತಮ್ಮಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ನಂತರ ಪ್ರಥಮ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿರುವುದು.

ಕನ್ನಡಪ್ರಭ ವಾರ್ತೆ ಮದ್ದೂರುಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ನಂತರ ಪ್ರಥಮ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಶುಕ್ರವಾರ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಜೆಡಿಎಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರ ಪೂರ್ವಭಾವಿ ಸಭೆ ನಂತರ ಕೇಂದ್ರ ಸಚಿವ ಕುಮಾರಸ್ವಾಮಿ ಸ್ವಾಗತದ ಸಿದ್ಧತೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಂಗಳೂರಿಂದ ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯ ಗಡಿಭಾಗವಾದ ನಿಡಗಟ್ಟ ಗ್ರಾಮಕ್ಕೆ ಆಗಮಿಸುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ ಎಂದರು. ನಂತರ ನೂರಾರು ಬೈಕ್ ರ್‍ಯಾಲಿಯಲ್ಲಿ ಪ್ರಮುಖ ರಸ್ತೆಗಳ ಮೂಲಕ ಪಟ್ಟಣದ ಪ್ರವಾಸಿ ಮಂದಿರ ವೃತ್ತಕ್ಕೆ ಕರೆತರಲಾಗುವುದು. ಈ ವೇಳೆ ಮನಮುಲ್ ನಿರ್ದೇಶಕ. ಬಿಜೆಪಿ ಮುಖಂಡ ಎಸ್ .ಪಿ. ಸ್ವಾಮಿ, ಜೆಡಿಎಸ್, ಮತ್ತು ಬಿಜೆಪಿ ಮೈತ್ರಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಲಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಕುಮಾರಸ್ವಾಮಿ ಕೆಲಕಾಲ ಮೈತ್ರಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಿದ ನಂತರ ಮತ್ತೆ ಬೈಕ್ ರ್‍ಯಾಲಿ ಮೂಲಕ ಮಂಡ್ಯಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಿದರು . ಪೂರ್ವಭಾವಿ ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಜೆಡಿಎಸ್ ರಾಜ್ಯ ಸಂಚಾಲಕ ಬಿಳಿಯಪ್ಪ, ಪುರಸಭೆ ಸದಸ್ಯರಾದ ಮಹೇಶ, ಎಂ.ಐ .ಪ್ರವೀಣ್, ಟಿ.ಆರ್. ಪ್ರಸನ್ನಕುಮಾರ್, ವನಿತಾ, ಪ್ರಮೀಳಾ, ಸುರೇಶ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಚನ್ನಸಂದ್ರ, ಜೆಡಿಎಸ್ ಮುಖಂಡರಾದ ಕೆಸ್ತೂರು ಗ್ರಾಪಂ ಸದಸ್ಯ ಜಗದೀಶ್, ಜೆಡಿಎಸ್ ಮುಖಂಡರಾದ ಬ್ಯಾಡರಹಳ್ಳಿ ರಾಮಕೃಷ್ಣ, ವಳೆಗೆರೆಹಳ್ಳಿ ಗಿರೀಶ, ಅವಿನಂದನ್ ಮತ್ತಿತರರು ಇದ್ದರು.