ಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆಗಳಿಂದ ದೈಹಿಕ ಸದೃಢರಾಗುವುದಲ್ಲದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಯ ಮಹತ್ವ ಸಾಕಷ್ಟಿದೆ. ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವದ ಗುಣ, ಆತ್ಮವಿಶ್ವಾಸ, ಸಹಕಾರ ಮನೋಭಾವವನ್ನು ಬೆಳೆಸುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಕ್ರೀಡೆಗಳಿಂದ ದೈಹಿಕ ಸದೃಢರಾಗುವುದಲ್ಲದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಯ ಮಹತ್ವ ಸಾಕಷ್ಟಿದೆ. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವದ ಗುಣ, ಆತ್ಮವಿಶ್ವಾಸ, ಸಹಕಾರ ಮನೋಭಾವವನ್ನು ಬೆಳೆಸುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ತೊರವಿಯ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಅ.23ರಿಂದ 25ರ ವರೆಗೆ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಅಂತರ್ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಪ್ರಾಮಾಣಿಕತೆ ಮತ್ತು ಕ್ರೀಡಾ ಸ್ಪರ್ಧೆಯಿಂದ ಸ್ಪರ್ಧಿಸಬೇಕು. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸಲು ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು, ಪರಸ್ಪರ ಸ್ನೇಹ ಬೆಳೆಸಲು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯ್ಯಲು ಪ್ರೇರಣೆಯಾಗಲಿದೆ ಎಂದರು.
ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.ಕ್ರೀಡಾಕೂಟದಲ್ಲಿ ಡಾ.ಎಂ.ಜಿ.ಪಾಟೀಲ, ಡಾ.ಬಸವರಾಜ ಅನಮ, ಪ್ರೊ.ಸಿ.ಎಂ.ತ್ಯಾಗರಾಜ, ಪ್ರೊ.ವಿಜಯಲಕ್ಷ್ಮಿ, ಪ್ರೊ.ಎಸ್.ಎಸ್.ರಾಜಮಾನ್ಯ, ಪ್ರೊ.ಎಸ್.ಎನ್.ಮೊನಪ್ಪ, ಡಾ.ವಿಶಾಲಾಕ್ಷಿ ಹೊನ್ನಸಕಟ್ಟಿ, ಸಂಗಮೇಶ್ವರ ಗುರವ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಕ್ರೀಡಾಪಟುಗಳು ಭಾಗವಹಿಸಿದ್ದರು.