ಎಲ್ಲರಿಗೂ ಒಳಿತಾಗಲಿ: ಸಚಿವ ಪರಮೇಶ್ವರ್

| Published : Jan 02 2024, 02:15 AM IST

ಸಾರಾಂಶ

ಮಾಗಡಿ: 2024ನೇ ವರ್ಷ ಎಲ್ಲರಿಗೂ ಒಳಿತನ್ನು ಮಾಡಲಿ, ಕೊರೋನಾ ತೊಲಗಿ ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಮಾಗಡಿ: 2024ನೇ ವರ್ಷ ಎಲ್ಲರಿಗೂ ಒಳಿತನ್ನು ಮಾಡಲಿ, ಕೊರೋನಾ ತೊಲಗಿ ಎಲ್ಲರೂ ಆರೋಗ್ಯವಂತರಾಗಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ ಹೊರತಂದಿರುವ ನೂತನ ವರ್ಷದ ದಿನದರ್ಶಿನಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಡವರ ಪರ ಸರ್ಕಾರ ಅಧಿಕಾರ ನಡೆಸುತ್ತಿದ್ದು ಕೊಟ್ಟ ಭರವಸೆಯಂತೆ ಐದು ಭರವಸೆಗಳನ್ನು ಈಡೇರಿಸಿದ್ದೇವೆ. ಇದರಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಜಾತಿಗಳಿಗೂ ಸರ್ಕಾರಿ ಸೌಲಭ್ಯಗಳನ್ನು ಸಮಾನವಾಗಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.

ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ ಮಾತನಾಡಿ, ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾಗಡಿ ತಾಲೂಕಿನವರೇ ಆಗಿರುವುದರಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳು ಮಾಗಡಿ ತಾಲೂಕಿಗೆ ಆಗುತ್ತಿದೆ. ಮುಂದೆಯೂ ಹೆಚ್ಚಿನ ಯೋಜನೆಗಳನ್ನು ಮಾಗಡಿ ತಾಲೂಕಿಗೆ ತಂದು ಅಭಿವೃದ್ಧಿಪಡಿಸಲಾಗುತ್ತದೆ. ಹೊಸ ವರ್ಷ ಎಲ್ಲರಿಗೂ ಸುಖ ಸಂತೋಷ ನೀಡಲಿ ಎಂದು ತಿಳಿಸಿದರು. ಪೋಟೋ 1ಮಾಗಡಿ1:

ಗೃಹ ಸಚಿವ ಜಿ.ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ ಅವರು ಹೊರತಂದ ದಿನಚರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಗಡಿಯ ಕಾಂಗ್ರೆಸ್‌ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.