ಕೋಲಾರ ಕ್ಷೇತ್ರದ ಎಲ್ಲ ಕಾಮಗಾರಿ ವರ್ಷದೊಳಗೆ ಪೂರ್ಣ

| Published : Jul 29 2025, 01:00 AM IST

ಸಾರಾಂಶ

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಾಕಿ ಇರುವ ರಸ್ತೆಗಳ ಅಭಿವೃದ್ಧಿ ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿಗೂ ಮನ್ನಣೆ ನೀಡಿದ್ದು, ಕ್ಷೇತ್ರದ ೩೨ ಹಳ್ಳಿಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಹಾಗೂ ಹೈಮಾಸ್ಟ್‌ ಲೈಟ್‌ಗಳನ್ನು ಅಳವಡಿಸಲಾಗಿದೆ

ಕನ್ನಡಪ್ರಭ ವಾರ್ತೆ ಕೋಲಾರಕಾಂಗ್ರೆಸ್ ಸರ್ಕಾರ ಸದಾ ಅಭಿವೃದ್ಧಿ ಪರವಾಗಿದೆ, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವ ಏಕೈಕ ಪಕ್ಷ ಕಾಂಗ್ರೆಸ್‌ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಬಣ್ಣಿಸಿದರು. ವೇಮಗಲ್-ಕುರುಗಲ್ ಪಟ್ಟಣದ ಪಂಚಾಯತಿ ಹಾಗೂ ಹೋಬಳಿ ಕೇಂದ್ರದಲ್ಲಿ ಒಟ್ಟು ೧೮ ಕೋಟಿ ರು.ಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಂತ ಹಂತವಾಗಿ ಕಾಮಗಾರಿ

ತಾವು ಕೊಟ್ಟ ಮಾತಿನಂತೆ ಕೆಲಸ ಮಾಡಿ ತೋರಿಸುವ ವ್ಯಕ್ತಿ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಚಾಲನೆ ನೀಡಿರುವ ೧೮ ಕೋಟಿ ರು.ಗಳ ವೆಚ್ಚದ ಎಲ್ಲಾ ಕಾಮಗಾರಿಗಳು ಸಂಪೂರ್ಣವಾಗಿ ನನ್ನ ಅವಧಿಯಲ್ಲಿ ಪರೀಶಿಲಿಸಿ, ವೀಕ್ಷಿಸಿ, ಪಟ್ಟಿಯಲ್ಲಿ ಸೇರಿಸಿ, ಟೆಂಡರ್ ಮುಖಾಂತರ ಕಾರ್ಯರೂಪಕ್ಕೆ ತಂದಿದ್ದೇವೆ. ಕೊಟ್ಟ ಮಾತಿನಂತೆ ನಡೆಯುತ್ತೆನೆ ಮುಂದೆಯೂ ನನ್ನ ಗುರಿ ಹೀಗೆ ಇರುತ್ತದೆ. ಇನ್ನು ಪಟ್ಟಣ ಪಂಚಾಯತಿ ವ್ಯಾಪ್ತಿಗೆ ೬೦ ಕೋಟಿ ರೂ ಕೆಲಸಗಳು ಬಾಕಿ ಇದೆ. ಅವೆಲ್ಲವೂ ಟೆಂಡರ್ ಪ್ರಕ್ರಿಯೆಯಲ್ಲಿ ನಡೆಯುತ್ತಿದೆ. ಹಾಗಾಗಿ ಚುನಾವಣೆ ಮುಗಿದ ನಂತರ ಹಂತ ಹಂತವಾಗಿ ಕಾರ್ಯರೂಪಕ್ಕೆ ತರುತ್ತೇವೆ ಎಂದು ಹೇಳಿದರು.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಾಕಿ ಇರುವ ರಸ್ತೆಗಳ ಅಭಿವೃದ್ಧಿ ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ರಾಜ್ಯದ ಅಭಿವೃದ್ಧಿಗೂ ಮನ್ನಣೆ ನೀಡಿದ್ದು, ಕ್ಷೇತ್ರದ ೩೨ ಹಳ್ಳಿಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಹಾಗೂ ಹೈಮಾಸ್ಟ್‌ ಲೈಟ್‌ಗಳನ್ನು ಅಳವಡಿಸಲಾಗಿದೆ ಎಂದರು.ಕಸ ವಿಲೇವಾರಿ ಘಟಕ

ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ೧೦ ಎಕರೆ ಜಾಗದಲ್ಲಿ ಕಸ ವಿಲೇವಾರಿ ಘಟಕ ಹಾಗೂ ಎಸ್‌ಟಿಪಿ ಪ್ಲಾಂಟ್ ನ್ನು ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣ ಪಂಚಾಯಿತಿ ಅಭಿವೃದ್ಧಿಗೆ ಒತ್ತು ನೀಡಿದ್ದು, ಪಟ್ಟಣ ಪಂಚಾಯಿತಿ ಯೋಜನಾ ಪ್ರಾಧಿಕಾರಕ್ಕೆ ಉತ್ತಮ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಿ, ಸರ್ಕಾರಕ್ಕೆ ಕಳುಹಿಸಲಾಗಿದೆ. ರಸ್ತೆಗಳು, ಚರಂಡಿಗಳ ಅಭಿವೃದ್ಧಿಗೆ ಟೆಂಡರ್ ಕರೆದು ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.ಪೌರ ಕಾರ್ಮಿಕರಿಂದ ಪೂಜೆ

ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ನಿಧಿಯಿಂದ ಎರಡು ಆಟೋ ಮತ್ತು ಪಿಟ್ ತೆಗೆಯುವ ಮೆಷಿನ್‌ಗೆ ಶಾಸಕ ಕೊತ್ತೂರು ಮಂಜುನಾಥ್ ಪೌರ ಕಾರ್ಮಿಕರ ಕೈಯಲ್ಲಿ ಪೂಜೆ ಮಾಡಿಸುವ ಮುಖೇನ ಉದ್ಘಾಟನೆ ಮಾಡಿಸಿದರು. ಇವರೇ ನಮ್ಮ ಆಸ್ತಿ ಬೆಳಗ್ಗೆ ಎದ್ದು ಆಚೆ ಬರುವಷ್ಟರಲ್ಲಿ ಸ್ವಚ್ಛವಾಗಿಡುತ್ತಾರೆ ಇವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ತಿಳಿಸಿದರು. ಎಂಎಲ್ಸಿ ಅನಿಲ್‌ಕುಮಾರ್ ಮಾತನಾಡಿ, ಅನ್ನಕ್ಕಾಗಿ ಯಾರೊಬ್ಬರೂ ಇನ್ನೊಬ್ಬರ ಮನೆಯ ಮುಂದೆ ನಿಂತು ಕೈಒಡ್ಡದಂತೆ ಮಾಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದರು, ಸಮಾಜದಲ್ಲಿ ಆರ್ಥಿಕ ಶಕ್ತಿ ಬರಲೆಂದು ಪಂಚ ಗ್ಯಾರಂಟಿಗಳನ್ನು ನೀಡಿದ್ದೇವೆ ಎಂದರು.

ಪಪಂ ಚುನಾವಣೆಯಲ್ಲಿ ಬೆಂಬಲಿಸಿ

ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ಎಲ್ಲ ವರ್ಗ, ಧರ್ಮದವರಿಗೆ ಸಮಾನ ಅವಕಾಶ, ಪ್ರತಿಯೊಬ್ಬ ಕಾರ್ಯಕರ್ತನಿಗೆ ಸ್ಥಾನಮಾನ ಕಾಂಗ್ರೆಸ್ ನೀಡಿದೆ. ಶತಮಾನದ ಇತಿಹಾಸ ಹೊಂದಿರುವ ರಾಷ್ಟ್ರೀಯ ಕಾಂಗ್ರೆಸ್, ಪ್ರತಿ ವಾರ್ಡ್‌ನಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಈ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಜಿಪಂ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಉರಟ ಆಗ್ರಹಾರ ಚೌಡರೆಡ್ಡಿ, ಮೈಲಾಂಡಹಳ್ಳಿ ಮುರಳಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಯಪ್ಪ, ಸೊಸೈಟಿ ಮಾಜಿ ಅಧ್ಯಕ್ಷೆ ಶೈಲಜಾ ಪಿ.ವೆಂಕಟೇಶ್, ಮಾಜಿ ಗ್ರಾಪಂ ಅಧ್ಯಕ್ಷ ಕುಮಾರ್ಇ ಮತ್ತಿತರರು ಇದ್ದರು.