ರಾತ್ರೋರಾತ್ರಿ ಜೆಸಿಬಿ ಯಂತ್ರದ ಮೂಲಕ ಅರಣ್ಯ ಪ್ರದೇಶದಲ್ಲಿದ್ದ ವಿವಿಧ ಜಾತಿಯ ನೂರಾರು ಮರಗಳನ್ನು ನಾಶಪಡಿಸಿರುವ ದುಷ್ಕರ್ಮಿಗಳು, ಬಳಿಕ ತೆಂಗಿನ ಸಸಿಗಳನ್ನು ನೆಡುವ ಮೂಲಕ ಸುಮಾರು ಎರಡು ಎಕರೆಯಷ್ಟು ಅರಣ್ಯ ಭೂಮಿ ಕಬಳಿಸಲು ಯತ್ನಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಮಾಚಗೋನಹಳ್ಳಿ ವ್ಯಾಪ್ತಿಯ ಸರ್ವೇ ನಂ. 23ರ ಅರಣ್ಯ ಭೂಮಿಯನ್ನು ಅತಿಕ್ರಮ ಯತ್ನ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.ರಾತ್ರೋರಾತ್ರಿ ಜೆಸಿಬಿ ಯಂತ್ರದ ಮೂಲಕ ಅರಣ್ಯ ಪ್ರದೇಶದಲ್ಲಿದ್ದ ವಿವಿಧ ಜಾತಿಯ ನೂರಾರು ಮರಗಳನ್ನು ನಾಶಪಡಿಸಿರುವ ದುಷ್ಕರ್ಮಿಗಳು, ಬಳಿಕ ತೆಂಗಿನ ಸಸಿಗಳನ್ನು ನೆಡುವ ಮೂಲಕ ಸುಮಾರು ಎರಡು ಎಕರೆಯಷ್ಟು ಅರಣ್ಯ ಭೂಮಿ ಕಬಳಿಸಲು ಯತ್ನಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಮಾಡಿ ಬೆಲೆಬಾಳುವ ಮರಗಳನ್ನು ನಾಶ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.ಕೂಡಲೇ ಸಬಂಧಪಟ್ಟ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅರಣ್ಯ ನಾಶ ಮಾಡಿ ಸರ್ಕಾರಿ ಭೂಮಿ ಕಬಳಿಸಲು ಯತ್ನಿಸಿರುವ ಗ್ರಾಮದ ಎಂ.ವಿ.ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅಲ್ಲಿಯವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಗ್ರಾಮಸ್ಥರು ಸ್ಥಳದಲ್ಲಿಯೇ ಧರಣಿ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ವಿ.ಅನಿಲ್ ಕುಮಾರ್, ಗ್ರಾಪಂ ಮಾಜಿ ಸದಸ್ಯರಾದ ಎಂ.ಎಸ್.ಬೋರಲಿಂಗೇಗೌಡ, ಎಂ.ಕೆ.ಯೋಗೇಂದ್ರ, ದಿಲೀಪ್, ಶ್ರೀಧರ್, ಜಗದೀಶ್, ರಾಜೇಗೌಡ, ದೇವರಾಜು, ರವಿಯಣ್ಣ, ಗೋಪಾಲ್, ಕಾಂತರಾಜು, ಚೇತನ್, ಮಂಜು ಮರೀಗೌಡ, ಪ್ರಸನ್ನ ಸೇರಿದಂತೆ ಮತ್ತಿತರರು ಇದ್ದರು.ಮಕ್ಕಳ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಶ್ರೀರಂಗಪಟ್ಟಣ:ಪಟ್ಟಣದ ಪರಿವರ್ತನಾ ಶಾಲೆ ಪಕ್ಕದ ಮರಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಆಶ್ರಮದ ಮಕ್ಕಳ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿಸಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕದ ಸಾಯಿ ಆಶ್ರಮದ ಎದುರುಗಡೆ ಇರುವ ಪರಿವರ್ತನಾ ಶಾಲೆ ಪಕ್ಕದ ಮರಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಆಶ್ರಮದ ಮಕ್ಕಳು ಮಾಲೀಕರಾದ ಸಾಯಿ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದ ಪಕ್ಕದಲ್ಲೇ ವಸತಿ ಸಹಿತ ಶಾಲೆ ಇರುವುದರಿಂದ ಮಕ್ಕಳು ಸಹ ಕೊಠಡಿಯಲ್ಲೇ ಇದ್ದು, ತಕ್ಷಣ ಸಾಯಿ ಕುಮಾರ್ ಅಗ್ನಿ ಶಾಮಕದಳ ಸಿಬ್ಬಂದಿಗೆ ಮಾಹಿತಿ ನೀಡಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.