ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಕಮ್ಯುನಿಸ್ಟ್ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಮೂಡಾ ಪ್ರಕರಣ ಹಾಗೂ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣವನ್ನು ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿರುವುದು ಸಂವಿಧಾನ ವಿರೋಧಿ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯಪಾಲರು ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಸರಿಯಾದ ಕ್ರಮವಲ್ಲ. ಕೇರಳ, ತಮಿಳುನಾಡು, ಪಾಂಡಿಚೇರಿ, ಪಶ್ಚಿಮ ಬಂಗಾಳ, ರಾಜಸ್ಥಾನ ಇನ್ನು ಮುಂತಾದ ರಾಜ್ಯಗಳಲ್ಲಿ ರಾಜ್ಯಪಾಲರು ಹಾಗೂ ಚುನಾಯಿತ ಸರ್ಕಾರಗಳ ನಡುವೆ ಸಂಘರ್ಷ ನಡೆಯುತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ರಾಜ್ಯ ಸರ್ಕಾರವನ್ನು ಕೆಡವಲು ರಾಜ್ಯಪಾಲರು ಆಸಕ್ತಿ ವಹಿಸುತ್ತಿರುವುದರ ಹಿಂದೆ ಯಾರ್ಯಾರ ಕೈವಾಡವಿದೆ ಎನ್ನುವುದನ್ನು ಬಹಿರಂಗಪಡಿಸಿ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಸಿಪಿಐನ ಜಿಲ್ಲಾ ಕಾರ್ಯದರ್ಶಿ ಜಿ.ಸಿ. ಸುರೇಶ್‍ಬಾಬು, ಸಿ.ವೈ. ಶಿವರುದ್ರಪ್ಪ, ಜಿಲ್ಲಾ ಮಂಡಳಿ ಸದಸ್ಯರುಗಳಾದ ಬಿ. ಬಸವರಾಜಪ್ಪ, ಟಿ.ಆರ್.ಉಮಾಪತಿ, ಸಹ ಕಾರ್ಯದರ್ಶಿ ದೊಡ್ಡುಳ್ಳಾರ್ತಿ ಕರಿಯಪ್ಪ, ಜಾಫರ ಷರೀಫ್, ಎಸ್.ಸಿ.ಕುಮಾರ್, ಎಲ್.ಸಿ.ಕುಮಾರ್, ಅಮೀನಾಭಿ, ಹನುಮಂತಪ್ಪ, ಈ. ಸತ್ಯಕೀರ್ತಿ, ಎಂ.ಬಿ.ಜಯದೇವಮೂರ್ತಿ ಪ್ರತಿಭಟನೆ ನೇತೃತ್ವ ವಹಿಸಿದ್ದರು.;Resize=(128,128))
;Resize=(128,128))
;Resize=(128,128))