ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಪಾದಯಾತ್ರೆ ಮೂಲ ಸಂಚು : ಮಾಜಿ ಶಾಸಕ ಎಚ್.ಪಿ. ಮಂಜುನಾಥ್

| Published : Aug 06 2024, 12:42 AM IST / Updated: Aug 06 2024, 11:42 AM IST

ಸಾರಾಂಶ

ರಾಜ್ಯಪಾಲರು ಯಾವುದೇ ಪಕ್ಷದ ಏಜೆಂಟರಲ್ಲ. ಅವರದ್ದು ಇಡೀ ರಾಜ್ಯವನ್ನ ಪಾಲನೆ ಮಾಡಬೇಕಾದ ಜವಾಬ್ದಾರಿಯುತ ಸಾಂವಿಧಾನಿಕ ಹುದ್ದೆ

 ಹುಣಸೂರು : ರಾಜ್ಯದ ರಾಜ್ಯಪಾಲರನ್ನು ಬಿಜೆಪಿ, ಜೆಡಿಎಸ್ ನಾಯಕರು ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಪಾದಯಾತ್ರೆ ಮೂಲ ಸಂಚು ರೂಪಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಆರೋಪಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ವತಿಯಿಂದ ಆ. 9 ರಂದು ಅಯೋಜನೆಗೊಂಡಿರುವ ಜನಾಂದೋಲನ ಸಮಾವೇಶದ ಕುರಿತಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ರಾಜ್ಯಪಾಲರು ಯಾವುದೇ ಪಕ್ಷದ ಏಜೆಂಟರಲ್ಲ. ಅವರದ್ದು ಇಡೀ ರಾಜ್ಯವನ್ನ ಪಾಲನೆ ಮಾಡಬೇಕಾದ ಜವಾಬ್ದಾರಿಯುತ ಸಾಂವಿಧಾನಿಕ ಹುದ್ದೆ. 

ಪ್ರತಿಪಕ್ಷಗಳ ಪರವಾಗಿ ಕೆಲಸ ಮಾಡಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸದೆ ಹಿಂದುಳಿದ ವರ್ಗದ ಮುಖ್ಯಮಂತ್ರಿ ತೊಂದರೆ ಕೊಡಲು ದಲಿತ ಅಲ್ಪಸಂಖ್ಯಾತರಿಗೆ ಅವಮಾನ ಮಾಡಲು ಬಿಜೆಪಿ, ಜೆಡಿಎಸ್ ನಾಯಕರು ಮುಂದಾಗಿದ್ದಾರೆ, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಉಂಟಾಗುವ ಅಶಾಂತಿಗೆ ಬಿಜೆಪಿ, ಜೆಡಿಎಸ್ ನಾಯಕರೇ ಕಾರಣರಾಗುತ್ತಾರೆ. ಇದನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಆದ್ದರಿಂದ ಆ. 9 ರಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಅವರ ಅಡಳಿತವನ್ನು ಬೆಂಬಲಿಸಿ ಆಯೋಜಿಸಿರುವ ಜನಾಂದೋಲನ ಸಮಾವೇಶದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ವಿ. ನಾರಾಯಣ್. ರಮೇಶ್, ಪ್ರೇಮ್ ಕುಮಾರ್, ಕಾರ್ಯಧ್ಯಕ್ಷ ವಕೀಲ ಪುಟ್ಟರಾಜ್, ಬಸವರಾಜಪ್ಪ, ಮುಖಂಡರಾದ ಕುನ್ನೇಗೌಡ, ಎ.ಪಿ.ಸ್ವಾಮಿ, ಜಯರಾಮ್, ಬಸವರಾಜ್, ಎಚ್.ಪಿ. ಅಮರನಾಥ್, ಅಣ್ಣಯ್ಯನಾಯ್ಕ, ಸುರೇಶ್, ಬಸವರಾಜಗೌಡ, ರಾಜು ಶಿವರಾಜೇಗೌಡ, ಟಿ.ಕೃಷ್ಣ, ಅಜ್ಗರ್ ಪಾಶ,ಸ್ವಾಮಿಗೌಡ, ಶಾಂತ ರಮೇಶ್, ನೇತ್ರಾವತಿ, ರೇಖಾಮಣಿ, ಕಲ್ಪನಾ, ಜಯಲಕ್ಷ್ಮಿ, ಕುಮಾರ್, ರಾಘು, ಚಿಕ್ಕಸ್ವಾಮಿ, ಲೋಕೇಶ್, ಸಂತೋಷ್, ವೆನ್ನಿ, ನಗರಸಭಾ ಸದಸ್ಯರು ಇದ್ದರು.