ಸಾರಾಂಶ
ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಬಿಜೆಪಿ- ಜೆಡಿಎಸ್ ಮೈತ್ರಿ ಬೆಂಬಲಿತ ಸದಸ್ಯೆ ಶೃತಿ ರವಿ ಅವಿರೋಧವಾಗಿ ಆಯ್ಕೆಯಾದರು.
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಬಿಜೆಪಿ- ಜೆಡಿಎಸ್ ಮೈತ್ರಿ ಬೆಂಬಲಿತ ಸದಸ್ಯೆ ಶೃತಿ ರವಿ ಅವಿರೋಧವಾಗಿ ಆಯ್ಕೆಯಾದರು.ಈ ಹಿಂದೆ ಅಧ್ಯಕ್ಷರಾಗಿದ್ದ ಮಂಜುಳಾ ಮಹಾದೇವ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದು ನಾಮಪತ್ರ ಸಲ್ಲಿಸುವ ವೇಳೆ ಶೃತಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ತಾಪಂ ಇಒ ರಾಮಲಿಂಗಯ್ಯ ಅಂತಿಮವಾಗಿ ಘೋಷಣೆ ಮಾಡಿದರು.
ನೂತನ ಅಧ್ಯಕ್ಷರನ್ನು ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸಿ.ಕೆ.ಸತೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಗ್ರಾಪಂ ಉಪಾಧ್ಯಕ್ಷೆ ನಿರ್ಮಲ, ದಯಾನಂದ, ರಘುನಂದನ್, ವೆಂಕಟೇಶ್, ಮಹದೇವ, ನಳಿನಿ, ಮಂಜುಳಾ, ಗಾಯತ್ರಿ, ಕೃಷ್ಣೆಗೌಡ, ಶಿವಲಿಂಗಯ್ಯ, ವಿನೋದ, ಮಂಗಳಮ್ಮ, ಜಯರತ್ನಮ್ಮ, ನಿವೃತ್ತ ಯೋಧ ಮಲ್ಲರಾಜು, ಬಿಜೆಪಿ ಮುಖಂಡರಾದ ಕೆಂಪಬೋರಯ್ಯ, ಮಹೇಂದ್ರ ಅಭಿನಂದಿಸಿದರು.ನ.೧ರಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಕನ್ನಡಪ್ರಭ ವಾರ್ತೆ ಮಂಡ್ಯಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನ.೧ರಿಂದ ಡಿಸೆಂಬರ್ ೧ ರವರೆಗೆ ನಡೆಸಲಾಗುತ್ತಿದೆ ಎಂದು ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ ರಾಜು ತಿಳಿಸಿದರು.
ರಾಜ್ಯದ ೩೧ ಜಿಲ್ಲೆಗಳಲ್ಲೂ ೬೯೯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ೩೨ ತಂಡಗಳನ್ನು ರಚಿಸಲಾಗಿದ್ದು, ಸದರಿ ಪಂದ್ಯಾವಳಿಯನ್ನು ಮುಂದಿನ ಪೀಳಿಗೆಯ ಕ್ರಿಕೆಟ್ ಪ್ರತಿಭೆಗೆ ವೇದಿಕೆಯನ್ನಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಪಂದ್ಯಾವಳಿಯನ್ನು ಬೆಂಗಳೂರಿನ ಆಚಾರ್ಯ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ೯ ಓವರ್‌ಗಳಿಗೆ ಸೀಮಿತಗೊಳಿಸಿದ್ದು, ಸಂಜೆ. ೭.೩೦ರಿಂದ ೯.೩೦ರವರೆಗೆ ಪಂದ್ಯಗಳು ನಡೆಯಲಿವೆ. ಎಲ್ಲ ಪಂದ್ಯಗಳನ್ನು ಪ್ರಸಾರ ಭಾರತಿಯ ಡಿ.ಡಿ. ಚಂದನದಲ್ಲಿ ನೇರ ಪ್ರಸಾರ ಮಾಡಲಾಗುವುದು. ಈ ಪಂದ್ಯಾವಳಿಯನ್ನು ಮುಂದಿನ ಹಂತಕ್ಕೆ ತಲುಪಿಸುವ ದೃಷ್ಟಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳಿಗೆ ಯೋಜನೆ ರೂಪಿಸಲಾಗುತ್ತದೆ. ಇದಕ್ಕಾಗಿ ರಾಜ್ಯದಿಂದ ೨೫ ಮಂದಿಯನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದರು.ಗೋಷ್ಠಿಯಲ್ಲಿ ಬಾಗೇಗೌಡ, ಮೋಹನ್ ಕುಮಾರ್, ಚನ್ನಬಸವಯ್ಯ, ರಾಜಶೇಖರ್, ಗಿರೀಶ್, ಮನು ಹಾಜರಿದ್ದರು.