ಮೈತ್ರಿ ಅಭ್ಯರ್ಥಿ ಡಾ.ವೈ.ಎ. ನಾರಾಯಣಸ್ವಾಮಿ ಗೆಲ್ಲಿಸಿ

| Published : May 30 2024, 12:54 AM IST

ಸಾರಾಂಶ

ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ, ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿರುವ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ . ನಾರಾಯಣಸ್ವಾಮಿ ಮತ್ತೊಮ್ಮೆ ಗೆಲುವು ಸಾಧಿಸಲಿದ್ದಾರೆ ಎಂದು ನಾರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ, ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿರುವ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ . ನಾರಾಯಣಸ್ವಾಮಿ ಮತ್ತೊಮ್ಮೆ ಗೆಲುವು ಸಾಧಿಸಲಿದ್ದಾರೆ ಎಂದು ನಾರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಹೇಳಿದರು.ತಾಲೂಕಿನ ಹೊಸೂರು, ಬೇವಿನಹಳ್ಳಿ, ಹುಣಸೇಹಳ್ಳಿ, ತಾವರೆಕೆರೆ, ಭುವನಹಳ್ಳಿ, ಮದಲೂರು, ಹುಳಿಗೆರೆ ಗ್ರಾಮಗಳಲ್ಲಿರುವ ಸರ್ಕಾರಿ ಪ್ರೌಢ ಶಾಲೆ ಹಾಗೂ ಅನುದಾನಿತ ಪ್ರೌಢ ಶಾಲೆಗಳ ಶಿಕ್ಷಕರನ್ನು ಬುಧವಾರ ಭೇಟಿ ನೀಡಿ ಮತಯಾಚಿಸಿ ಮಾತನಾಡಿದರು. ಸರಳ ಸಜ್ಜನಿಕೆಯ ರಾಜಕಾರಣಿ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಶಿಕ್ಷಕರ ಮೆಚ್ಚಿನ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಈ ಬಾರಿ ಮತ್ತೆ ಗೆಲುವು ಸಾಧಿಸಲಿದ್ದಾರೆ ಎಂದರು.

ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಿ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು. ಪ್ರಜ್ಞಾವಂತ ಶಿಕ್ಷಕರು ಜೂನ್ 3ರಂದು ನಡೆಯುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿ ಡಾ.ವೈ.ಎ.ನಾರಾಯಣಸ್ವಾಮಿ ಅವರಿಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು. ನಿವೃತ್ತ ಶಿಕ್ಷಕ ಗೋಪಿ ಕುಂಟೆ ಕುಮಾರ್, ಬಿಜೆಪಿ ಮುಖಂಡ ಚಿಕ್ಕನಕೋಟೆ ಕರಿಯಣ್ಣ, ಬೇವಿನಹಳ್ಳಿ ಸಿದ್ದೇಶ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.