ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ

| Published : May 16 2024, 12:45 AM IST

ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ
Share this Article
  • FB
  • TW
  • Linkdin
  • Email

ಸಾರಾಂಶ

ಈ ಬಾರಿ ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ವಿಶ್ವಾಸ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ಈ ಬಾರಿ ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವೈ.ಎ.ನಾರಾಯಣಸ್ವಾಮಿ ಸತತ ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದ್ದರಿಂದ ಈ ಬಾರಿ ಮೈತ್ರಿ ಅಭ್ಯರ್ಥಿ ಆಗಿರುವುದರಿಂದ ಗೆಲುವು ನಿಶ್ಚಿತ. ಯಾವುದೇ ತೊಂದರೆ ಇಲ್ಲ. ಆದರೂ ನಾವು ಮೈ ಮರೆಯಬಾರದು. ಸಂಘಟಿತ ಹೋರಾಟ ಮಾಡಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕಾಗಿದೆ ಎಂದು ತಿಳಿಸಿದರು.

ನಾರಾಯಣ ಸ್ವಾಮಿ ಕೂಡ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಸಾಕಷ್ಟು ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದನೆ ಮಾಡಿರುತ್ತಾರೆ. ಇಂಥವರಿಂದ ಮಾತ್ರ ಶಿಕ್ಷಕರ ಸ್ಪಂದನೆಗೆ ಸಾಧ್ಯ ಎಂದರು.

ಅಭ್ಯರ್ಥಿ ವೈ.ಎ.ನಾರಾಯಣ ಸ್ವಾಮಿ ಮಾತನಾಡಿ, ಅಧಿಕಾರಿಗಳ ಹಿಟ್ಲರ್ ದರ್ಬಾರ್ ಆಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಣ ಇಲಾಖೆಯಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರ ದುಡ್ಡಿನಿಂದ ಗೆಲ್ಲಬಹುದು ಎಂಬ ಭ್ರಮೆಯಲ್ಲಿ ಕಾಂಗ್ರೆಸ್ಸಿದೆ. ಆದರೆ, ಅದು ಸಾಧ್ಯವಾಗದ ಮಾತು. ಏಕೆಂದರೆ, ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಶಿಕ್ಷಕರ ಸ್ಪಂದನೆಗೆ ಸಾಕಷ್ಟು ಶ್ರಮಿಸಿದ್ದೇನೆ ಎಂದರು.

ರಾಜ್ಯದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ.63 ಆಗಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಈ ಬಾರಿ ಎರಡೂವರೆ ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದು ಶಿಕ್ಷಣ ಇಲಾಖೆಯ ವೈಫಲ್ಯ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಗೆ ನಡೆದಂತೆ ಮೋದಿ ಅವರಿಗೆ ಮತ ನೀಡಿದಂತೆ ಈ ಬಾರಿ ಶಿಕ್ಷಕ ವರ್ಗವು ಕೂಡ ಮೋದಿ ಅವರ ನೋಡಿ ಮತ ನೀಡಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಎನ್.ನಿಂಗಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ, ಚಿತ್ರದುರ್ಗ ವಿಪ ಸದಸ್ಯ ನವೀನ್, ಭಾನುವಳ್ಳಿ ಅಣ್ಣಪ್ಪ, ರಾಮ್ ರೆಡ್ಡಿ, ಸಾಂಬಶಿವಯ್ಯ ಸೇರಿದಂತೆ ಹರಿಹರ, ಜಗಳೂರು, ಮಾಯಕೊಂಡ, ದಾವಣಗೆರೆ ಕ್ಷೇತ್ರದ ಕಾರ್ಯಕರ್ತರು ಪಾಲ್ಗೊಂಡಿದ್ದರು.

- - - -15ಕೆಡಿವಿಜಿ36ಃ:

ದಾವಣಗೆರೆಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಆಗ್ನೇಯ ಶಿಕ್ಷಕ ಕ್ಷೇತ್ರದ ಅಭ್ಯರ್ಥಿ ವೈ.ಎ. ನಾರಾಯಣ ಸ್ವಾಮಿ ಮಾತನಾಡಿದರು.