ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನೈಋತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುವುದು ಖಚಿತ ಎಂದು ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು.ಇಲ್ಲಿನ ಜಿಲ್ಲಾ ಬಂಜಾರ ಕನ್‌ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮಾಂತರ ಬಿಜೆಪಿ ವತಿಯಿಂದ ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಮಾವೇಶದಲ್ಲಿ ಮಾತನಾಡಿ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ ಸ್ಪರ್ಧಿಸಿದ್ದು, ಯಾವುದೇ ಮತಗಳು ತಿರಸ್ಕೃತಗೊಳ್ಳದಂತೆ ಮತ ಚಲಾಯಿಸಿ ಅಭ್ಯರ್ಥಿಗಳ ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳಿಸಿ ಕೊಡೋಣ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಮಾತನಾಡಿ, ಪದವೀಧರರ ಸಮಸ್ಯೆಗಳ ಆಲಿಸಿ ಮಾರ್ಗೋಪಾಯಗಳ ಕಂಡು ಕೊಳ್ಳಲು ವಿಧಾನ ಪರಿಷತ್ ಸೂಕ್ತವಾದ ವೇದಿಕೆ. ಈ ನಿಟ್ಟಿನಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಮರ್ಥರು ಸ್ಪರ್ಧಿಸಿದ್ದಾರೆ, ಅವರನ್ನು ಆಯ್ಕೆ ಮಾಡಿ ಸೇವೆಗೆ ಅವಕಾಶ ಮಾಡಿಕೊಡಬೇಕು, ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ಮತ ನೀಡಬೇಕು ಎಂದು ಮನವಿ ಮಾಡಿದರು. ಬಹುದೊಡ್ಡ ಸಂಘಟನಾ ಶಕ್ತಿ:ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಈಗಾಗಲೇ ಕ್ಷೇತ್ರದ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದು, ಉತ್ತಮ ಸ್ಪಂದನೆ, ಬೆಂಬಲ ಸಿಕ್ಕಿದೆ, ಬಿಜೆಪಿಯು ಕಾರ್ಯಕರ್ತರ ಬಹುದೊಡ್ಡ ಸಂಘಟನಾ ಶಕ್ತಿ ಹೊಂದಿದೆ, ಎಲ್ಲರೂ ಪ್ರಾಮಾಣಿಕವಾಗಿ ಸಕ್ರಿಯವಾಗಿದ್ದು, ಮೊದಲನೇ ಪ್ರಾಶಸ್ತ್ಯದ ಗೆಲುವು ನಮ್ಮದಾಗಲಿದೆ, ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ತಾಲ್ಲೂಕು ಅಧ್ಯಕ್ಷ ಸಿಂಗನಹಳ್ಳಿ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಸವರಾಜಪ್ಪ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಕೆಎಂಎಫ್ ನಿರ್ದೇಶಕರಾದ ದಿನೇಶ್ ಬುಳ್ಳಾಪುರ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್ ಪಿಳ್ಳಂಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಅಣ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷ ನಾಗರತ್ನ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರೇಮಾ ಸುಧಾಕರ್, ತಮಿಳು ಸಮಾಜದ ಮುಖಂಡ ಪೆರುಮಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್, ತಾಲೂಕು ಮಾಜಿ ಅಧ್ಯಕ್ಷ ಭಾಗ್ಯ ಜಗದೀಶ್, ಬಿಜೆಪಿ ಯುವ ಮುಖಂಡ ವಿರೂಪಾಕ್ಷಪ್ಪ, ತಾಲೂಕು ಖಜಾಂಚಿ ಯತೀಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಮರಾವ್ ಕೋರೆ, ಕೇಶವ ಶಿವಕುಮಾರ್ ಮತ್ತಿತರರಿದ್ದರು.--------------
ಮತ್ತೂರಿನಲ್ಲಿ ಮತಯಾಚನೆನೈಋತ್ಯ ಪದವೀಧರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಮತದಾರರ ಸಭೆ ಶುಕ್ರವಾರ ಸಮೀಪದ ಮತ್ತೂರು ಗ್ರಾಮದಲ್ಲಿ ನಡೆಯಿತು. ಸಭೆಯಲ್ಲಿ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ್ ಜೀ, ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್.ದತ್ತಾತ್ರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್, ಹಿರಿಯ ಮುಖಂಡರಾದ ಶಿವನಂಜಪ್ಪ, ಮಹಾಶಕ್ತಿ ಅಧ್ಯಕ್ಷರಾದ ಅಜಯ್ ಸೇರಿ ಸ್ಥಳೀಯ ಬಿಜೆಪಿ ಮುಖಂಡರಿದ್ದರು.
----------------------ಸರ್ಜಿ ಗೆಲುವಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ
ಶಿವಮೊಗ್ಗ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠ, ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸರ್ಜಿ ಅಭಿಮಾನಿ ಬಳಗದ ವತಿಯಿಂದ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಗೆಲುವಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್, ಯುವ ಮುಖಂಡ ವರುಣ್ ಸೇರಿ ಅಭಿಮಾನಿಗಳಿದ್ದರು.------------------------------
ಕಾಲೇಜಿನಲ್ಲಿ ಮತಯಾಚನೆಶಿವಮೊಗ್ಗದ ಜವಾಹರಲಾಲ್ ಇಂಜಿನಿಯರಿಂಗ್ ಕಾಲೇಜಿಲ್ಲಿ ಶುಕ್ರವಾರ ನೈಋತ್ಯ ಪದವೀಧರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಉಪನ್ಯಾಸಕರು, ಆಡಳಿತ ವರ್ಗ ಮತ್ತು ಸಿಬ್ಬಂದಿಗಳಲ್ಲಿ ಮತಯಾಚಿಸಿದರು. ಈ ವೇಳೆ ಕಾಲೇಜಿನ ಪ್ರಾಂಶುಪಾಲ ವೈ.ವಿಜಯ ಕುಮಾರ್, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್ ಮತ್ತಿತರರಿದ್ದರು.
--------------