ಸಾರಾಂಶ
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಉಭಯ ಪಕ್ಷದ ನಾಯಕರು ದೇವೇಗೌಡರ ಆರೋಗ್ಯ ವಿಚಾರಿಸಿದರಲ್ಲದೆ ಜಿಲ್ಲಾ ರಾಜಕಾರಣದ ಕುರಿತು ಚರ್ಚಿಸಿದ್ದಾರೆ.
ಮಂಡ್ಯ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶನಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ಉಭಯ ಪಕ್ಷದ ನಾಯಕರು ದೇವೇಗೌಡರ ಆರೋಗ್ಯ ವಿಚಾರಿಸಿದರಲ್ಲದೆ ಜಿಲ್ಲಾ ರಾಜಕಾರಣದ ಕುರಿತು ಚರ್ಚಿಸಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿನ ರಾಜಕೀಯ ಬೆಳವಣಿಗೆ ಜತೆಗೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಆರ್‌ಎಸ್‌ಎಸ್ ಮೇಲಿನ ನಿಷೇಧ, ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ವಿಫಲವಾಗಿರುವುದು ಹಾಗೂ ಈ ಕುರಿತು ಹೋರಾಟ ನಡೆಸುವುದು ಸೇರಿದಂತೆ ಹಲವು ಮಹತ್ವದ ವಿಷಯದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಇದ್ದರು.