ಬಿಜೆಪಿ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಅನುದಾನ ದೂರುಪಯೋಗ ಆರೋಪ

| Published : Dec 24 2023, 01:45 AM IST

ಸಾರಾಂಶ

ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಸಚಿವ ಬೋದರಾಜು ಆರೋಪ

ಮಸ್ಕಿ: ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಾಂಗಕ್ಕೆ ಕಾಂಗ್ರೆಸ್ ಮೀಸಲಿಟ್ಟ ಹಣವನ್ನು ಬಿಜೆಪಿ ಸರ್ಕಾರದಲ್ಲಿ ಎಸ್ಟಿ, ಎಸ್ಟಿ ಹೆಸರಿನಲ್ಲಿ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿದ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಬೋಸರಾಜು ಆರೋಪಿಸಿದರು.

ಪಟ್ಟಣದ ಕವಿತಾಳ ರಸ್ತೆ ಬಳಿ ಸಮಾಜ ಕಲ್ಯಾಣ ಇಲಾಖೆವತಿಯಿಂದ 4.98 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭಿವೃದ್ಧಿಗಾಗಿ ಹಣ ಮೀಸಲು ಇಡುವ ಕಾನೂನನ್ನು ಸಿದ್ದರಾಮಯ್ಯ ಅವರು 2014ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದರು.

ತಿಂಗಳಿಗೊಮ್ಮೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಂದೊಂದು ಹಾಸ್ಟೆಲ್‌ನಲ್ಲಿ ವಾಸ್ತವ್ಯ ಮಾಡುವ ರೂಢಿಬೆಳಸಿಕೊಳ್ಳಬೇಕು ಇದರಿಂದ ಹಾಸ್ಟೆಲ್‌ನಲ್ಲಿರುವ ಸಮಸ್ಯೆಗಳಿಗೆ ಪರಿಹರಿಸಲು ಸಾಧ್ಯವಾಗುತ್ತದೆ ಎಂದರು.

ದೇಶದ ಇತಿಹಾಸಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿ ಹಣ ಮೀಸಲು ಇಡುವುದಕ್ಕಾಗಿ ಕಾನೂನನ್ನು 2014ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತ್ತು.

ಸಚಿವರು ಬಿಜೆಪಿಯವರು ತಿದ್ದುಪಡಿ ಮಾಡಿದ್ದ ಕಾಯ್ದೆಯನ್ನು ರದ್ದು ಮಾಡಿ ಮತ್ತೆ ಎಸ್ಸಿ, ಎಸ್ಟಿ ಕಾನೂನು ಪುನಃ ಜಾರಿಗೆ ತರಲಾಗಿದೆ ಎಂದರು. ಎಲ್ಲಾ ಸಮುದಾಯಗಳ ಅಭಿವೃದ್ದಿಗಾಗಿ ಸರ್ಕಾರ ಬದ್ಧವಾಗಿದೆ ಎಂದರು.

ಪಟ್ಟಣದಿಂದ ಹಾಸ್ಟೇಲ್ ದೂರ ಇದ್ದರೆ ವಿದ್ಯಾರ್ಥಿಗಳ ಅನೂಕೂಲಕ್ಕಾಗಿ ಬಸ್ ವ್ಯವಸ್ಥೆ ಮಾಡಲು ಅಧಿಕಾರಿಗಳು ಸರಕಾರದ ಗಮಮಕ್ಕೆ ತಂದು ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು. ಸರ್ಕಾರ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಕೋವಿಡ್ ತಡೆಗಟ್ಟಲು ಸಿಎಂ ಸಿದ್ದರಾಮಯ್ಯನವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ ಎಂದು ಹೇಳಿದರು.

ನಂತರ ಶಾಸಕ ಆರ್.ಬಸನಗೌಡ ತುರುವಿಹಾಳ ಮಾತನಾಡಿ ವಸತಿ ನಿಲಯ ಖಾಸಗಿ ಕಟ್ಟಡದಲ್ಲಿದ್ದಾಗ ವಿದ್ಯಾರ್ಥಿಗಳಿಗೆ ಬಹಳ ಅವ್ಯವಸ್ಥೆ ಇತ್ತು ಆದ್ದರಿಂದ ವಿದ್ಯಾರ್ಥಿಗಳು ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಸಮಾಜದಲ್ಲಿ ಮುಂದೆ ಬರಬೇಕು ಎಂದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಸಿದ್ನಾಳ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಉಮೇಶ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ಅಭಿಯಂತರ ನರೇಶ, ಕಟ್ಟಡದ ಗುತ್ತಿಗೆದಾರ ನಾರಾಯಣ ಸಿಂಗಾಡೆ ರಾಜು ಮಹೇಂದ್ರಕರ್ ಇತರರು ಇದ್ದರು.