ಸಾರಾಂಶ
ಕಾರವಾರ:
ಗ್ರಾಮ ಪಂಚಾಯಿತಿಗಳಲ್ಲಿನ ವಸತಿರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯಿತಿಯಲ್ಲಿ ಠರಾವು ಮಾಡಿ, ವರದಿ ನೀಡಿದರೆ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಸತೀಶ ಸೈಲ್ ಹೇಳಿದರು.ಇಲ್ಲಿನ ಜಿಲ್ಲಾ ರಂಗಮಂದಿರದಲ್ಲಿ ಜಿಪಂ ಹಾಗೂ ತಾಪಂ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಬಸವ ವಸತಿ ಯೋಜನೆ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಮಾತನಾಡಿದರು.ಕಾರವಾರ ತಾಲೂಕಿನ 18 ಗ್ರಾಪಂಗಳಲ್ಲಿ ಬಸವ ಯೋಜನೆಯಡಿ 486 ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಯೋಜನೆಯಡಿ 13 ಸೇರಿದಂತೆ ಒಟ್ಟೂ 499 ಫಲಾನುಭವಿಗಳು 2022-23ನೇ ಸಾಲಿನಲ್ಲಿ ಆಯ್ಕೆಯಾಗಿದ್ದು, ಎಲ್ಲ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಲು ಹಂತ-ಹಂತವಾಗಿ ಸಹಾಯಧನ ಬಿಡುಗಡೆಯಾಗಲಿದೆ. ಈ ಮೂಲಕ ಬಹುದಿನಗಳ ತಮ್ಮ ಸ್ವಂತ ಮನೆ ನಿರ್ಮಾಣದ ಕನಸನ್ನು ಸಾಕಾರಗೊಳಿಸಿಕೊಳ್ಳಬಹುದು ಎಂದು ಹೇಳಿದರು.ವಿವಿಧ ಗ್ರಾಮಗಳಿಂದ ಬಂದಿದ್ದ ಸಾರ್ವಜನಿಕರ ಅಹವಾಲು ಆಲಿಸಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುವ ಮುನೋಭಾವ ಬೆಳೆಸಿಕೊಳ್ಳಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು, ರಸ್ತೆ, ಸ್ಮಶಾನ ಭೂಮಿ ಒದಗಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಈರಣ್ಣಗೌಡ, ವಿವಿಧ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))