ಮಾನವ ಸರಪಳಿ ಕಾರ್ಯಕ್ರಮಕ್ಕೆ ಜವಾಬ್ದಾರಿ ಹಂಚಿಕೆ

| Published : Sep 13 2024, 01:43 AM IST

ಸಾರಾಂಶ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದ ಜವಾಬ್ದಾರಿಗಳನ್ನು ಹಂಚಲು ನಗರದ ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ರಾಜೇಶ್ ಕುಮಾರ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಹಿರಿಯೂರು

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದ ಜವಾಬ್ದಾರಿಗಳನ್ನು ಹಂಚಲು ನಗರದ ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ರಾಜೇಶ್ ಕುಮಾರ್ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಸಲಾಯಿತು.

ತಾಲೂಕು ಮಟ್ಟದ ಅಧಿಕಾರಿಗಳು, ಕಾಲೇಜುಗಳ ಪ್ರಾಂಶುಪಾಲರು ಹಾಗೂ ಹೊಸದುರ್ಗ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಮಾನವ ಸರಪಳಿ ಕಾರ್ಯಕ್ರಮದ ತಾಲೂಕು ನೋಡಲ್ ಅಧಿಕಾರಿಗಳಾಗಿ ವಿಶೇಷ ಭೂ ಸ್ವಾಧೀನ ಅಧಿಕಾರಿ ವೆಂಕಟೇಶ್ ನಾಯ್ಕ, ಪ್ಲಾನಿಂಗ್ ಆಫೀಸರ್ ಮಹೇಂದ್ರ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಮಧುರವರನ್ನು ನೇಮಕ ಮಾಡಲಾಯಿತು.

5 ಕಿಮೀ ಒಬ್ಬರಂತೆ ಉಸ್ತುವಾರಿ ನೋಡಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಗೂ ಒಂದು ಕಿಮೀ ಒಬ್ಬರಂತೆ ಶಾಲೆಗಳ ಮುಖ್ಯ ಶಿಕ್ಷಕರನ್ನು ನೇಮಕ ಮಾಡಲಾಯಿತು. ಪ್ರತಿ ನೂರು ಮೀಟರ್ ಗೆ ಸಹಶಿಕ್ಷಕರರು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಮಾನವ ಸರಪಳಿ ನಿರ್ಮಿಸಲು ಮಾನವ ಸಂಪನ್ಮೂಲ ಕ್ರೂಢಿಕರಣಕ್ಕಾಗಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ. ತಿಪ್ಪೇಸ್ವಾಮಿ, ಸಿಡಿಪಿಓ ರಾಘವೇಂದ್ರ, ಟಿ ಎಚ್.ಓ ಡಾ. ವೆಂಕಟೇಶ್, ಕೃಷಿ ಇಲಾಖೆ ಎಡಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಎಡಿ. ದಿನೇಶ್, ಪ್ರಾಂಶುಪಾಲರುಗಳಾದ ಮಹೇಶ್ವರಪ್ಪ, ಬಿಆರ್. ಹನುಮಂತರಾಯ, ವೀರಣ್ಣ ಮುಂತಾದವರು ಉಪಸ್ಥಿತರಿದ್ದರು.