ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜ್ಯದ ಜನತೆಗೆ ಮಾಡಿದ ದ್ರೋಹವಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಆರೋಪಿಸಿದರು. ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ತಾಲೂಕು ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ರಾಜ್ಯಪಾಲರು ಯಾವುದೇ ಆಧಾರವಿಲ್ಲದೇ ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಆದೇಶ ಮಾಡಿದ್ದಾರೆ. ಅದನ್ನು ವಾಪಸ್ ಪಡೆಯಬೇಕು. ಮುಡಾದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಇಲ್ಲ. ಸಿದ್ದರಾಮಯ್ಯ 40 ವರ್ಷದಿಂದ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ಮಾಡಿದ್ದಾರೆ. ಇಡೀ ರಾಜ್ಯದ ಜನತೆ, 136 ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆ ಎಂದರು.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತರ, ಹಿಂದುಳಿದವರ, ದೀನ ದಲಿತರ ಪರವಾಗಿ ಕಾರ್ಯಕ್ರಮ ರೂಪಿಸಿದ್ದಾರೆ. ಅವರ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ರಾಜ್ಯಪಾಲರು ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ ಎಂದರು. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜು ಬರಗೂರು ಮಾತನಾಡಿ, ರಾಜ್ಯಪಾಲರು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಬಿಜೆಪಿ ಜೆಡಿಎಸ್ ಸಿದ್ದರಾಮಯ್ಯ ಅವರನ್ನು ವಿರೋಧಿಸುತ್ತಿದ್ದಾರೆ ಎಂದರು. ನಗರಸಭೆ ಅಧ್ಯಕ್ಷೆ ಪೂಜಾ ಪೆದ್ದರಾಜು ಮಾತನಾಡಿ, ಸಿದ್ದರಾಮಯ್ಯ ಸಂವಿಧಾನ ಬದ್ಧವಾಗಿ ಜನರಿಂದ ಆಯ್ಕೆಯಾಗಿದ್ದಾರೆ. ಎಲ್ಲಾ ಹಿಂದುಳಿದ ವರ್ಗದ ನಾಯಕರಾಗಿದ್ದಾರೆ. ನಾವು ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಮಾತೇ ಇಲ್ಲ ಎಂದರು. ಕನಕ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ರಂಗನಾಥ್, ಶಿವಶಂಕರ್, ಕೋಟೆ ಲೋಕೇಶ್, ಗುಳಿಗೇನಹಳ್ಳಿ ನಾಗರಾಜು, ಎಸ್.ಎನ್.ಸುನಿಲ್, ಮಹೇಂದ್ರ ಗೌಡ, ಜಿಷಾನ್ ಮೊಹಮದ್, ಬುರಾನ್ ಮೊಹಮದ್, ಅಜಯ್ಕುಮಾರ್, ಬಿ.ಎಂ.ರಾಧಾಕೃಷ್ಣ, ಮಹೇಶ್, ದೃವಕುಮಾರ್, ರೂಪೇಶ್ ಕೃಷ್ಣಯ್ಯ, ಶಿವು ಚಂಗಾವರ, ವಾಜರಹಳ್ಳಿ ರಮೇಶ್, ನೂರುದ್ದಿನ್ ಭಾಗವಹಿಸಿದ್ದರು.