85 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ: ಪ್ರತೀಕ್ ಬಾಯಲ್

| Published : Mar 20 2024, 01:16 AM IST

85 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತದಾನಕ್ಕೆ ಅವಕಾಶ: ಪ್ರತೀಕ್ ಬಾಯಲ್
Share this Article
  • FB
  • TW
  • Linkdin
  • Email

ಸಾರಾಂಶ

ಮತದಾರರು ಮತದಾನಕ್ಕೆ ಬಂದಾಗ ಅವರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮತದಾನ ಮಾಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಈ ಬಾರಿ 85 ವರ್ಷ ಮೇಲ್ಪಟ್ಟ ಮತದಾರರು ಮತದಾನ ಕೇಂದ್ರಕ್ಕೆ ತೆರಳಲು ಸಾಧ್ಯವಾಗದಿದ್ದಲ್ಲಿ ಅವರ ಮನೆಗೆ ತೆರಳಿ ಮತದಾನ ಮಾಡಲು ಅವಕಾಶ ಕಲ್ಪಿಸವಾಗುತ್ತದೆ.

ಕನ್ನಡಪ್ರಭ ವಾರ್ತೆ ಮಣಿಪಾಲದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬ ಮತದಾರರು ಮತದಾನದ ಮೂಲಕ ಚುನಾವಣೆಯಲ್ಲಿ ಭಾಗವಹಿಸಬೇಕು. ಉಡುಪಿ ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನ ಮಾಡಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಸ್ವೀಪ್ ಸಮಿತಿ ಅಧ್ಯಕ್ಷ ಪ್ರತೀಕ್ ಬಾಯಲ್ ಹೇಳಿದರು.ಅವರು ರಜತಾದ್ರಿಯ ಜಿ.ಪಂ.ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾರರು ಮತದಾನಕ್ಕೆ ಬಂದಾಗ ಅವರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ ಮತದಾನ ಮಾಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಈ ಬಾರಿ 85 ವರ್ಷ ಮೇಲ್ಪಟ್ಟ ಮತದಾರರು ಮತದಾನ ಕೇಂದ್ರಕ್ಕೆ ತೆರಳಲು ಸಾಧ್ಯವಾಗದಿದ್ದಲ್ಲಿ ಅವರ ಮನೆಗೆ ತೆರಳಿ ಮತದಾನ ಮಾಡಲು ಅವಕಾಶ ಕಲ್ಪಿಸವಾಗುತ್ತದೆ ಎಂದವರು ಹೇಳಿದರು.ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ನಿರ್ಭೀತರಾಗಿ ಮತ ಚಲಾಯಿಸಬೇಕು ಎಂದ ಅವರು ಬಿ.ಎಲ್.ಒ. ಗಳು ಮನೆಮನೆಗೆ ತೆರಳಿ ಪ್ರತಿಯೊಬ್ಬ ಮತದಾರರಿಗೂ ಮತದಾನ ಕ್ರಮಸಂಖ್ಯೆಯ ಚೀಟಿಯನ್ನು ವಿತರಿಸಬೇಕು ಎಂದು ಸೂಚನೆ ನೀಡಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂಬುದನ್ನು https://electoralsearch.eci.gov.in/ ವೆಬ್ ಸೈಟಿನಲ್ಲಿ ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ. ಹೆಸರು ಬಿಟ್ಟುಹೋಗಿದ್ದಲ್ಲಿ https://voterportal.eci.gov.in/ ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಿ ಹೆಸರ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ.ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನಿರ್ದೇಶಕಿ ಶ್ಯಾಮಲಾ ಸಿ.ಕೆ., ಕಾರ್ಮಿಕ ಇಲಾಖೆಯ ಅಧಿಕಾರಿ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಡಿ.ಡಿ.ಪಿ.ಯು. ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.