ಸಾರಾಂಶ
ಕಡೂರು, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಬೀರೂರು ಠಾಣಾ ವ್ಯಾಪ್ತಿಯಲ್ಲಿರುವ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಮತ್ತು ಬ್ಲಾಕ್ ಸ್ಪಾಟ್ ಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ, ಕಡೂರು
ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಬೀರೂರು ಠಾಣಾ ವ್ಯಾಪ್ತಿಯಲ್ಲಿರುವ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಮತ್ತು ಬ್ಲಾಕ್ ಸ್ಪಾಟ್ ಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಆಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಕೃಷ್ಣಮೂರ್ತಿ ಹಾಗು ಸ್ಥಳೀಯ ಪೋಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
ಇದೇ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಂಚಾರ ನಿರ್ವಹಣೆ ಹಾಗೂ ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ತರೀಕೆರೆ ಡಿವೈಎಸ್ಪಿ ಹಾಲಮೂರ್ತಿರಾವ್, ಕಡೂರು ಪೊಲೀಸ್ ವೃತ್ತ ನಿರೀಕ್ಷಕ ದುರುಗಪ್ಪ, ಪಿಎಸೈ ಧನಂಜಯ ಮತ್ತಿತರರು ಇದ್ದರು.25ಕೆಕೆಡಿಯು1.ರಸ್ತೆ ಸುರಕ್ಷತೆ ಕುರಿತು ಹಿರಿಯ ಪೋಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.