ಅಭಿವೃದ್ಧಿ ಕೆಲಸಗಳ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೂ ಶ್ರಮಿಸುತ್ತೇನೆ: ಸಂಸದೆ ಪ್ರಿಯಾಂಕಾ

| Published : Jun 11 2024, 01:37 AM IST

ಅಭಿವೃದ್ಧಿ ಕೆಲಸಗಳ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೂ ಶ್ರಮಿಸುತ್ತೇನೆ: ಸಂಸದೆ ಪ್ರಿಯಾಂಕಾ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನತೆ 90 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆ ಸ್ವಂತ ಮಗಳಂತೆ ಪ್ರೀತಿ ತೋರಿದರು. ನಾನು ರಾಜಕೀಯ ಪ್ರವೇಶಿಸಿದ್ದು ಮಹಿಳೆಯರಿಗೆ ಸಂತೋಷ ತಂದಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.

ಕನ್ನಡಪ್ರಭ ವಾರ್ತೆ ಮೈಸೂರು

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಮೈಸೂರು ಜಿಲ್ಲಾ ಮತ್ತು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಅಭಿನಂದಿಸಲಾಯಿತು.

ಸಂಸದರಾಗಿ ಆಯ್ಕೆಯಾದ ಬಳಿಕ ಮೈಸೂರಿನ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ ಅವರು, ಕಾಂಗ್ರೆಸ್ ಶಾಸಕರು, ಮುಖಂಡರಿಂದ ಸನ್ಮಾನ ಸ್ವೀಕರಿಸಿದರು.

ನಂತರ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನತೆ 90 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆ ಸ್ವಂತ ಮಗಳಂತೆ ಪ್ರೀತಿ ತೋರಿದರು. ನಾನು ರಾಜಕೀಯ ಪ್ರವೇಶಿಸಿದ್ದು ಮಹಿಳೆಯರಿಗೆ ಸಂತೋಷ ತಂದಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ತಂದೆ ಸತೀಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಎಲ್ಲ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಅಭಿವೃದ್ಧಿ ಕೆಲಸಗಳ ಜೊತೆಗೆ ಕಾಂಗ್ರೆಸ್ಪಕ್ಷ ಸಂಘಟನೆಗೂ ಶ್ರಮಿಸುತ್ತೇನೆ ಎಂದರು.

ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರ ಮಕ್ಕಳು ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವಲ್ಲ. ಅವರಂತೆ ಜನ ಸಾಮಾನ್ಯರ ಪರವಾಗಿ ಕೆಲಸ ಮಾಡುವುದನ್ನು ಮುಂದುವರಿಸಬೇಕು. ನೂತನವಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಅವರು ಸಂಸತ್ತಿನಲ್ಲಿ ಮಹಿಳೆಯರ ಧ್ವನಿಯಾಗಲಿ, ಪಕ್ಷ ಸಂಘಟನೆಗೂ ಶ್ರಮಿಸಲಿ ಎಂದು ಕಿವಿಮಾತು ಹೇಳಿದರು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ನಾನು ಅತ್ಯಂತ ಕಿರಿಯ ಶಾಸಕನಾಗಿ ಆಯ್ಕೆಯಾಗಿದ್ದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಅತ್ಯಂತ ಕಿರಿಯೆ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜನಪ್ರತಿನಿಧಿಯಾಗಿ ಉತ್ತಮ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ಮಾತನಾಡಿ, ಚಿಕ್ಕೊಡಿ ಕ್ಷೇತ್ರದಲ್ಲಿ ಪ್ರಿಯಾಂಕಾ ಅವರ ಗೆಲುವು ಸಚಿವರಾದ ಸತೀಶ್ಜಾರಕಿಹೊಳಿ ಅವರ ನೈತಿಕ ಗಟ್ಟಿತನಕ್ಕೆ ಸಾಕ್ಷಿಯಾಗಿದೆ ಎಂದರು.

ಶಾಸಕ ಅನಿಲ್ ಚಿಕ್ಕಮಾದು, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್, ಮಾಜಿ ಮೇಯರ್ ಪುಷ್ಪಲತಾ ಚಿಕ್ಕ ಣ್ಣ, ಜಿಪಂ ಮಾಜಿ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ, ಮುಖಂಡರಾದ ರಾಹುಲ್ ಜಾರಕಿಹೊಳಿ, ಸುನಂದಕುಮಾರ್, ನಟರಾಜ್, ಪುಷ್ಪವಲ್ಲಿ, ಈಶ್ವರ್ಚಕ್ಕಡಿ, ಗಿರೀಶ್ಮೊದಲಾದವರು ಇದ್ದರು.ಸಿಎಂ ಎದುರು ನಿಲ್ಲಲಾಗದು

ಮೈಸೂರಿನ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ನಿಲ್ಲಲಾಗದ ಪರಿಸ್ಥಿತಿ ಬಂದಿದೆ. ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಸೋಲು ಕಷ್ಟಕರವಾಗಿದೆ. ಮುಖ್ಯಮಂತ್ರಿಗಳಿಗೆ ಮುಖ ತೋರಿಸುವುದೇ ಕಷ್ಟವಾಗಿದೆ. ನೂತನವಾಗಿ ಆಯ್ಕೆಯಾದ 9 ಸಂಸದರು ಮೈಸೂರಿಗೆ ಬಂದು ಪಕ್ಷಕ್ಕೆ ಬಲ ತುಂಬಬೇಕು. ಕಾರ್ಯಕರ್ತರನ್ನು ಹುರಿ ದುಂಬಿಸಬೇಕು ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ತಿಳಿಸಿದರು.ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಆಶೀರ್ವಾದ ಪಡೆದ ಪ್ರಿಯಾಂಕಾಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮೈಸೂರಿನ ಗಾಂಧಿನಗರದಲ್ಲಿರುವ ಉರಿಲಿಂಗಿಪೆದ್ದಿ ಮಠಕ್ಕೆ ಸೋಮವಾರ ಭೇಟಿ ನೀಡಿ, ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.ಇದೇ ವೇಳೆ ಚಾಮರಾಜನಗರದ ಲೇಖಕ ಕೆ. ಶ್ರೀಧರ್ ಅವರ ಕೃತಿಗಳಾದ ಒಡಪಾಡು, ದೊಡ್ಡಸಂಪಿಗೆ, ಗೌರಿ ಮಕ್ಕಳು ಮತ್ತು ಪಂಚಮುಖಿ ಪುಸ್ತಕಗಳ ಮುಖಪುಟಗಳನ್ನು ಪ್ರಿಯಾಂಕಾ ಜಾರಕಿಹೊಳಿ ಅನಾವರಣಗೊಳಿಸಿದರು. ಕಲಾವಿದರಾದ ಜೆ.ಮೂರ್ತಿ ಮುಡಿಗುಂಡ, ಗಾಯಕ ರವಿಕುಮಾರ್ ಇದ್ದರು.ನಂತರ ಸುಣ್ಣದಕೇರಿಯ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ನಗರಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ಅವರು ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿ ಪ್ರಿಯಾಂಕಾ ಅವರು ಅಭಿನಂದನೆ ಸ್ವೀಕರಿಸಿದರು. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ರಾಹುಲ್ ಜಾರಕಿಹೊಳಿ ಮೊದಲಾದವರು ಇದ್ದರು.