ಸಾರಾಂಶ
ಮಂಡ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ, ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಪ್ರಥಮ ಸ್ಥಾನದ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗಾಗಿ ಎಲ್ಲಾ ಮಕ್ಕಳಿಗೂ ಸಂಸ್ಥೆ ಪರ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆಯಲು ಹಾರೈಸುತ್ತೇನೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಬಿಜಿಎಸ್ ಶಿಕ್ಷಣ ಸಂಸ್ಥೆ ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಹೇಮಗಿರಿ ಶಾಖಾಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಹೇಳಿದರು.ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಶಾಲೆಯ ನೂತನ ಆಡಳಿತ ಕಚೇರಿ ಉದ್ಘಾಟನೆ ಹಾಗೂ ವಿಜ್ಞಾನ ನಾಟಕ ಪ್ರದರ್ಶನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಶಾಲಾ ಮಕ್ಕಳನ್ನು ಅಭಿನಂದಿಸಿ ಮಾತನಾಡಿದರು.
ಮಂಡ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ, ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಪ್ರಥಮ ಸ್ಥಾನದ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗಾಗಿ ಎಲ್ಲಾ ಮಕ್ಕಳಿಗೂ ಸಂಸ್ಥೆ ಪರ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆಯಲು ಹಾರೈಸುತ್ತೇನೆ ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಮಾತನಾಡಿ, ಮಕ್ಕಳು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು. ಮಕ್ಕಳು ಮುಂದಿನ ದಿನಗಳಲ್ಲಿ ಬದುಕು ರೂಪಿಸಿಕೊಳ್ಳಬೇಕಾದರೆ ಶಿಕ್ಷಣದ ಜತೆಗೆ ಸಂಸ್ಕಾರವನ್ನು ಕಲಿಯಬೇಕು ಎಂದು ತಿಳಿಸಿದರು.
ಇದೇ ವೇಳೆ ಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಡಳಿತ ಕಚೇರಿಯನ್ನು ಉದ್ಘಾಟಿಸಲಾಯಿತು. ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್ ಮಾತನಾಡಿದರು. ಬಿಜೆಪಿ ಅಧ್ಯಕ್ಷ ಧನಂಜಯ್, ಪುರಸಭೆ ಉಪಾಧ್ಯಕ್ಷ ಅಶೋಕ್, ಸದಸ್ಯ ಮುರುಳಿ, ಅಶ್ವತ್ಥ್ ಕುಮಾರೇಗೌಡ, ವಿಜಿಕುಮಾರ್, ಎಚ್.ಎನ್.ಮಂಜುನಾಥ್, ಬಿ.ಎಸ್.ಜಯರಾಮು, ಕಣಿವೆರಾಮು ಸೇರಿ ಹಲವರು ಹಾಜರಿದ್ದರು.