ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀನಿವಾಸಪುರಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳು ಭಾರತೀಯ ಸಂಸ್ಕೃತಿ, ಪರಂಪರೆ ಯುವ ಸಮುದಾಯಕ್ಕೆ ಬೋಧನೆ ಮಾಡಬೇಕಾದ ಅಗತ್ಯ ಇದೆ ಎಂದು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮಿ ಅಭಿಪ್ರಾಯಪಟ್ಟರು.ಶ್ರೀನಿವಾಸಪುರದ ಹೊರವಲಯದ ಶ್ರೀ ಭೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ೧೦ ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕಾಲೇಜು ಕಟ್ಟಡದ ಸಂಕೀರ್ಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಯುವ ಸಮುದಾಯ ಉತ್ತಮ ಹಾಗೂ ಮೌಲ್ಯಯುತ ಮಾರ್ಗದಲ್ಲಿ ಸಾಗಲು ವಿದ್ಯೆ ಅತ್ಯಂತ ಸಹಕಾರಿಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಲ್ಲಿನ ಕೌಶಲ್ಯಾಧಾರಿತ ಶೈಕ್ಷಣಿಕ ನೈಪುಣ್ಯತೆ ಗುರುತಿಸಿ ಪ್ರೋತ್ಸಾಹಿಸಬೇಕಿದೆ, ಈ ನಿಟ್ಟಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ ಎಂದರು.ಕಟ್ಟಡ ಕಾಮಗಾರಿ ೧೦ ತಿಂಗಳಲ್ಲಿ ಪೂರ್ಣಗೊಳಿಸಿ:ಕಾಲೇಜು ಕಟ್ಟಡದ ಸಂಕೀರ್ಣವನ್ನು ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿ ಗುಣಮಟ್ಟ ಕಾಪಾಡಿಕೊಂಡು ೧೦ ತಿಂಗಳ ಒಳಗಾಗಿ ಕಾಮಗಾರಿ ಮುಗಿಸುವಂತೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸೂಚಿಸಿದರು.ಈ ಭಾಗದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಪಡೆಯಲು ಅಗತ್ಯ, ಶಿಕ್ಷಣ ಸಂಸ್ಥೆಗಳು ಇಲ್ಲ ಬಿಜಿಎಸ್ ಶಿಕ್ಷಣ ಸಂಸ್ಥೆ ಈ ನಿಟ್ಟಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲು ಹೆಜ್ಜೆ ಇಟ್ಟಿದೆ ವಿದ್ಯಾರ್ಥಿಗಳು ಈ ಸದಾವಕಾಶ ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆಯಿತ್ತರು.ಚಿಕ್ಕಬಳ್ಳಾಪುರ ಬಿಜಿಎಸ್ ಶಾಖಾ ಮಠದ ಆಡಳಿತಾಧಿಕಾರಿ ಪ್ರೊ.ಶಿವರಾಮರೆಡ್ಡಿ, ಭೈರವೇಶ್ವರ ವಿದ್ಯಾನಿಕೇತನ ಆಡಳಿತ ಮಂಡಳಿ ನಿರ್ದೇಶಕ ಕಲ್ಲೂರು ವೆಂಕಟರೆಡ್ಡಿ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಗಂಗಾಧರಗೌಡ, ಭೈರವೇಶ್ವರ ವಿದ್ಯಾನಿಕೇತನ ಪ್ರಾಂಶುಪಾಲ ವೆಂಕಟರಮಣಾರೆಡ್ಡಿ, ಪದವಿ ಕಾಲೇಜು ಪ್ರಾಂಶುಪಾಲ ಕೃಷ್ಣಮೂರ್ತಿ, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವೇಣುಗೋಪಾಲರೆಡ್ಡಿ, ಡಿಸಿಸಿ ಬ್ಯಾಂಕ್ ನಿದೇರ್ಶಕ ವೆಂಕಟರೆಡ್ಡಿ, ಮುಖಂಡರಾದ ಲಕ್ಷ್ಮಣರೆಡ್ಡಿ, ಬೈರಪಲ್ಲಿಗೋಪಾಲರೆಡ್ಡಿ, ಬಸ್ ಶ್ರೀನಿವಾಸರೆಡ್ಡಿ, ಯಲ್ದೂರು ಹರಿನಾಥರೆಡ್ಡಿ, ಶಿವಪುರ ಗಣೇಶ್, ಕೆ.ಇ.ಬಿ ಸುಬ್ಬಿರೆಡ್ಡಿ ಇದ್ದರು.