ಸಾರಾಂಶ
ಮನುಷ್ಯ ದೈನಂದಿನ ಜೀವನದಲ್ಲಿ ಶಾರೀರಿಕ ಸದೃಢತೆ ಜತೆಗೆ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಪಿ.ಮಮತಾ ಹೇಳಿದರು. ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಕಾನೂನು ಅರಿವು, ನೆರವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ನಿತ್ಯ ದುಡಿಯುವ ಕೈಗಳಿಗೆ ಒಂದಿಲ್ಲೊಂದು ಮಾನಸಿಕ ಒತ್ತಡ, ಖಿನ್ನತೆ ಕಾಡುವುದು ಕಂಡುಬರುತ್ತಿದೆ. ಅಂತಹ ಸನ್ನಿವೇಶದಲ್ಲಿ ತಜ್ಞ ವೈದ್ಯರ ಸಲಹೆ ಪಡೆಯವ ಅಗತ್ಯವಿದೆ ಎಂಬುದನ್ನು ಎಲ್ಲರೂ ಮನಗಾಣಬೇಕು ಎಂದರು.
ಅರಸೀಕೆರೆ: ಮನುಷ್ಯ ದೈನಂದಿನ ಜೀವನದಲ್ಲಿ ಶಾರೀರಿಕ ಸದೃಢತೆ ಜತೆಗೆ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಪಿ.ಮಮತಾ ಹೇಳಿದರು.
ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಕಾನೂನು ಅರಿವು, ನೆರವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ನಿತ್ಯ ದುಡಿಯುವ ಕೈಗಳಿಗೆ ಒಂದಿಲ್ಲೊಂದು ಮಾನಸಿಕ ಒತ್ತಡ, ಖಿನ್ನತೆ ಕಾಡುವುದು ಕಂಡುಬರುತ್ತಿದೆ. ಅಂತಹ ಸನ್ನಿವೇಶದಲ್ಲಿ ತಜ್ಞ ವೈದ್ಯರ ಸಲಹೆ ಪಡೆಯವ ಅಗತ್ಯವಿದೆ ಎಂಬುದನ್ನು ಎಲ್ಲರೂ ಮನಗಾಣಬೇಕು. ಕಾನೂನಿನ ಅಡಿಯಲ್ಲಿ ಶಿಕ್ಷೆ ಎದುರಿಸುತ್ತಿರುವ ವ್ಯಕ್ತಿಯ ಮಾನಸಿಕ ಆರೋಗ್ಯ ರಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಇಲಾಖೆ ಮತ್ತು ಕಾನೂನು ಸೇವಾ ಪ್ರಾಧಿಕಾರ ಜನಪರ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ ಎಂದು ಬಣ್ಣಿಸಿದರು.ತಾಲೂಕು ವಕೀಲರ ಸಂಘದ ಅಧ್ಯಕ್ಷ ಸದಾನಂದ, ಕಾರ್ಯದರ್ಶಿ ಪ್ರಕಾಶ್, ವಕೀಲರಾದ ಸಿದ್ದಮಲ್ಲಪ್ಪ, ವಿರೂಪಾಕ್ಷ ,ಆರೋಗ್ಯ ಹಾಗೂ ವಕೀಲರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.