ಸಾರಾಂಶ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಡಾ.ಹೆಚ್.ನರಸಿಂಹಯ್ಯ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದರು. ಈಗ ಈ ಕಾಲೇಜುಗಳಲ್ಲಿ ಹೊಸ ಹೊಸ ಕೋರ್ಸುಗಳನ್ನು ತೆರೆಯಲಾಗಿದೆ. ಎಂಜಿನಿಯರಿಂಗ್ ಕಾಲೇಜು ಹಾಗೂ ಫಾರ್ಮಸಿ ಕಾಲೇಜುಗಳನ್ನು ಸ್ಥಾಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಸಹಕಾರಿಯಾಗಿಲಿದೆ ಎಂದು ನ್ಯಾಷನಲ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಡಾ.ಎಚ್.ಎನ್. ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.ನಗರದ ಅಶ್ವತ್ಥಯ್ಯ ಇಸ್ತೂರಿ ಸಂಜೀವಮ್ಮ ನ್ಯಾಷನಲ್ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಶ್ರೀ ಇಸ್ತೂರಿ ನಿತಿಲ್ ಪ್ರಾಯೋಜಿತ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ಮಟ್ಟದ ಪುರುಷರ ಬಾಸ್ಕೆಟ್ ಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಪಠ್ಯೇತರ ಜ್ಞಾನವೂ ಅಗತ್ಯವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು, ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗವಹಿಸುವುದು ಬಹಳ ಮುಖ್ಯ, ಆದರೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.
ಹೊಸ ಕೋರ್ಸ್‌ಗಳ ಆರಂಭನ್ಯಾಷನಲ್ ಎಜುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ.ವೆಂಕಟಶಿವಾರೆಡ್ಡಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಡಾ.ಹೆಚ್.ನರಸಿಂಹಯ್ಯ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದರು. ಈಗ ನಮ್ಮ ಕಾಲೇಜುಗಳಲ್ಲಿ ಹೊಸ ಹೊಸ ಕೋರ್ಸುಗಳನ್ನು ತೆರೆಯಲಾಗಿದೆ. ಎಂಜಿನಿಯರಿಂಗ್ ಕಾಲೇಜು ಹಾಗೂ ಫಾರ್ಮಸಿ ಕಾಲೇಜುಗಳನ್ನು ಸ್ಥಾಪಿಸಲಾಗಿದೆ ಎಂದರು.
ನಗರಸಭೆ ಅಧ್ಯಕ್ಷ-ಲಕ್ಷ್ಮೀನಾರಾಯಣ, ಉಪಾಧ್ಯಕ್ಷ-ಫರೀದ್, ಆಡಳಿತಮಂಡಳಿ ಸದಸ್ಯರಾದ-ರಾಮ್ ಮೋಹನ್, ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ-ವೆಂಕಟಸ್ವಾಮಿ, ಸದಸ್ಯರಾದ- ವೆಂಕಟರಮಣಪ್ಪ, ನಗರಸಭೆ ಸದಸ್ಯರಾದ ರಾಜ್ ಕುಮಾರ್, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯಿತ್ರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಟಿ.ಜಯರಾಮ್, ಉಪ ಪ್ರಾಂಶುಪಾಲರಾದ ಟಿ.ನಂಜುಂಡಪ್ಪ ಮತ್ತಿತರರು ಹಾಜರಿದ್ದರು.