ಕಾಪು: ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ 2003-04ನೇ ಶೈಕ್ಷಣಿಕ ವರ್ಷದ ಬಿಕಾಂ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ್ ಶೆಟ್ಟಿ ಮಾತನಾಡಿ, ಕ್ರಿಯಾಶೀಲ ವಿದ್ಯಾರ್ಥಿಗಳ ಹೆಗ್ಗುರುತು ತಾವು ಕಲಿತ ಸಂಸ್ಥೆಯ ಬಗ್ಗೆ ಗೌರವ, ಆದರ ಇಟ್ಟುಕೊಂಡು ಸಾಧ್ಯವಾದ ಸಹಾಯ ಮಾಡುವುದು. ಈ ದಿಶೆಯಲ್ಲಿ ಸಂಸ್ಥೆ ಈ ವಿದ್ಯಾರ್ಥಿಗಳ ಕೊಡುಗೆಯನ್ನು ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದರು.ಮುಖ್ಯ ಅತಿಥಿಗಳಾಗಿ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ಬದಲಾದ ಕಾಲಮಾನದಲ್ಲಿ ಹಳೆ ವಿದ್ಯಾರ್ಥಿಗಳು ಈ ಸಂಸ್ಥೆಗೆ ಬಂದು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ 2203 - 04ನೇ ನೇ ಸಾಲಿನ ಎಲ್ಲ ಉಪನ್ಯಾಸಕರು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದು, ಅನಿಸಿಕೆಗಳನ್ನು ಹಂಚಿಕೊಂಡರು. ಈ ಸಂದರ್ಭ ಹಳೆ ವಿದ್ಯಾರ್ಥಿಗಳು ಕಾಲೇಜಿನ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 1.50 ಲಕ್ಷ ರು. ದೇಣಿಗೆಯಾಗಿ ನೀಡಿದರು. ಅಲ್ಲದೆ ನಿವೃತ್ತ ಹಾಗೂ ಪ್ರಸ್ತುತ ಇರುವ ಉಪನ್ಯಾಸಕರು ಮತ್ತು ಬೋಧಕೇತರ ವೃಂದದವರನ್ನು ಸನ್ಮಾನಿಸಿದರು.ಕಾರ್ಯಕ್ರಮವನ್ನು ಹಳೆ ವಿದ್ಯಾರ್ಥಿಗಳು ನಿರೂಪಿಸಿ, ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಡಾ. ಸೋನಾ ಎಚ್.ಸಿ. ವಂದಿಸಿದರು. ನಿವೃತ್ತ ಉಪನ್ಯಾಸಕರು ಮತ್ತು ಬೋಧಕೇತರರು, ಕಾಲೇಜಿನ ಎಲ್ಲ ಬೋಧಕ, ಬೋಧಕೇತರರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.