ಆಲೂರುಸಿದ್ದಾಪುರ ಸರ್ಕಾರಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

| Published : Oct 14 2025, 01:02 AM IST

ಸಾರಾಂಶ

ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಆಲೂರು ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಮೀಪದ ಆಲೂರುಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಿ ಮಡಿಕೇರಿ ತಾಲೂಕಿನ ವಾಲಿಬಾಲ್ ತಂಡವನ್ನು ಸೋಲಿಸಿದ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ತಂಡವು ಕೊಡಗು ಜಿಲ್ಲೆಯಿಂದ ಪ್ರತಿನಿಧಿಸಲಿದ್ದಾರೆ ಎಂದು ಆಲೂರುಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾ ತರಬೇತುದಾರ ಹಂಚೇಟ್ಟಿರ ಪಿ.ಕರುಂಬಯ್ಯ ಮತ್ತು ಶಾಲೆಯ ಮುಖ್ಯ ಶಿಕ್ಷಕ ಎಸ್.ಕೆ.ಉದಯ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.