ಆಳ್ವಾಸ್‌ನ ಧನಲಕ್ಷ್ಮೀ ಕಬಡ್ಡಿ ವಿಶ್ವಕಪ್‌ ತಂಡಕ್ಕೆ ಆಯ್ಕೆ

| Published : Nov 13 2025, 01:45 AM IST

ಆಳ್ವಾಸ್‌ನ ಧನಲಕ್ಷ್ಮೀ ಕಬಡ್ಡಿ ವಿಶ್ವಕಪ್‌ ತಂಡಕ್ಕೆ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಆಳ್ವಾಸ್ ಸ್ಪೋರ್ಟ್ಸ್‌ ಕ್ಲಬ್‌ನ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನ.15ರಿಂದ 25ರ ವರೆಗೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ್‌ ಕ್ಲಬ್‌ನ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನ.15ರಿಂದ 25ರ ವರೆಗೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನಲಕ್ಷ್ಮೀ, ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ.

ಇವರು ಮೂಲ್ಕಿ ತಾಲೂಕಿನ ಇಡ್ಯಾ ನಾರಾಯಣ ಪೂಜಾರಿ ಮತ್ತು ಶಶಿಕಲಾ ದಂಪತಿಯ ಪುತ್ರಿ. ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ ಬಹುಬೇಡಿಕೆಯ ಕ್ರೀಡಾಪಟುವಾಗಿರುವ ಧನಲಕ್ಷ್ಮೀ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯೊಂದಿಗೆ ಡಿಪ್ಲೋಮಾ ಕೋರ್ಸ್‌ಗಳನ್ನು ಸಂಪೂರ್ಣ ಕ್ರೀಡಾ ದತ್ತು ಶಿಕ್ಷಣ ಯೋಜನೆಯಲ್ಲಿ ಉಚಿತವಾಗಿ ಪಡೆದಿದ್ದಾರೆ.ಇವರು ಜೂನಿಯರ್ ನ್ಯಾಷನಲ್, ಸೀನಿಯರ್ ನ್ಯಾಷನಲ್ ಹಾಗೂ ಫೆಡರೇಷನ್ ಕಪ್‌ನಲ್ಲಿ ಒಟ್ಟು 12 ಬಾರಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಈಗಾಗಲೇ ಸೀನಿಯರ್ ಹಾಗೂ ಜೂನಿಯರ್ ವಿಭಾಗದಲ್ಲಿ 4 ಬಾರಿ ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಪ್ರಸ್ತುತ ಗುಜರಾತಿನ ಗಾಂಧಿನಗರದಲ್ಲಿರುವ ಸಾಯ್ ಸೆಂಟರ್‌ನಲ್ಲಿ ಅಂತಿಮ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ನಮ್ಮ ವಿದ್ಯಾರ್ಥಿನಿ ಧನಲಕ್ಷ್ಮೀ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವುದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹೆಮ್ಮೆಯ ಕ್ಷಣ. ಕ್ರೀಡೆ ಮತ್ತು ಶಿಕ್ಷಣದ ಸಮನ್ವಯ ನಮ್ಮ ‘ಕ್ರೀಡಾ ದತ್ತು ಶಿಕ್ಷಣ ಯೋಜನೆ’ಯ ಯಶಸ್ಸಿಗೆ ಶ್ರೇಷ್ಠ ಉದಾಹರಣೆ. ದಕ್ಷಿಣ ಭಾರತದ ಏಕೈಕ ಪ್ರತಿನಿಧಿಯಾಗಿ ಆಕೆಯ ಆಯ್ಕೆ, ಪ್ರತಿಭೆ, ಪರಿಶ್ರಮ ಮತ್ತು ಶಿಸ್ತಿನ ಪ್ರತಿಫಲ. ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. ಆಕೆಯು ದೇಶದ ಕೀರ್ತಿಯನ್ನು ವಿಶ್ವ ವೇದಿಕೆಯಲ್ಲಿ ಉನ್ನತ ಮಟ್ಟಕ್ಕೆ ಏರಿಸಲಿ.

-ಡಾ. ಎಂ. ಮೋಹನ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ