ಆಳ್ವಾಸ್‌ನಿಂದ ಕರಾವಳಿ ಕರ್ನಾಟಕದ ಮೊದಲ ಕೃಷಿ ವಿಜ್ಞಾನ, ಆಹಾರ ತಂತ್ರಜ್ಞಾನ ಪದವಿ ಕೋರ್ಸ್‌

| Published : Nov 03 2025, 03:03 AM IST

ಆಳ್ವಾಸ್‌ನಿಂದ ಕರಾವಳಿ ಕರ್ನಾಟಕದ ಮೊದಲ ಕೃಷಿ ವಿಜ್ಞಾನ, ಆಹಾರ ತಂತ್ರಜ್ಞಾನ ಪದವಿ ಕೋರ್ಸ್‌
Share this Article
  • FB
  • TW
  • Linkdin
  • Email

ಸಾರಾಂಶ

ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣ ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ ಹಾಗೂ ಕೈಗಾರಿಕಾ ತರಬೇತಿಯ ಸೌಲಭ್ಯಗಳನ್ನು ಒದಗಿಸಲಿದೆ.

ಕನ್ನಡಪ್ರಭ ವಾರ್ತೆ ಮೂಡುಬಿದಿರೆಮಿಜಾರಿನ ಶೋಭಾವನ ಆವರಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನೂತನ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಬಹು ಬೇಡಿಕೆಯ ನಾಲ್ಕು ವರ್ಷದ ಅವಧಿಯ ಬಿಎಸ್ಸಿ (ಆನರ್ಸ್) ಅಗ್ರಿಕಲ್ಚರ್ ಮತ್ತು ಬಿ.ಟೆಕ್ ಫುಡ್ ಟೆಕ್ನಾಲಜಿ ಕೋರ್ಸ್‌ ಪ್ರಾರಂಭಿಸುತ್ತಿದೆ. ಈ ಕಾಲೇಜು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಕಾರ್ಯನಿರ್ವಹಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪ್ರಕಟಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣ ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ ಹಾಗೂ ಕೈಗಾರಿಕಾ ತರಬೇತಿಯ ಸೌಲಭ್ಯಗಳನ್ನು ಒದಗಿಸಲಿದೆ ಎಂದರು.ಆಳ್ವಾಸ್ ಸಂಸ್ಥೆ ಈಗಾಗಲೇ ಮಂಗಳೂರು ವಿವಿ, ರಾಜೀವ್‌ಗಾಂಧಿ ವಿವಿ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿವಿಯ ಪಠ್ಯಕ್ರಮಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದ್ದು, ಇದೀಗ ಕೆಳದಿ ಶಿವಪ್ಪ ನಾಯಕ್ ಕೃಷಿ ಮತ್ತು ಹಾರ್ಟಿಕಲ್ಚರ್ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕೃಷಿ ಮತ್ತು ಆಹಾರ ತಂತ್ರಜ್ಞಾನ ವಿಭಾಗಗಳ ಸೇರ್ಪಡೆ ಸಂಸ್ಥೆಯ ಶೈಕ್ಷಣಿಕ ಬೆಳವಣಿಗೆಯಲ್ಲಿ ಮತ್ತೊಂದು ಮೈಲುಗಲ್ಲಾಗಲಿದೆ ಎಂದರು.2025ನೇ ಶೈಕ್ಷಣಿಕ ವರ್ಷದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಯನ್ನು (9448458334, 8050585606) ಸಂಪರ್ಕಿಸಲು ಕೋರಲಾಗಿದೆ. ಕಾಲೇಜು ಕೋಡ್ (ಫಾರ್ಮ ಸೈನ್ಸ್) 038 ಆಗಿರಲಿದೆ ಎಂದರು.ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ ಪೀಟರ್ ಫರ್ನಾಂಡಿಸ್, ಆಳ್ವಾಸ್ ಪದವಿ( ಸ್ವಾಯತ್ತ) ಕಾಲೇಜಿನ ಪಾಚಾರ್ಯ ಡಾ. ಕುರಿಯನ್ ಇದ್ದರು.