ಸಾರಾಂಶ
ಯೇನೆಪೋಯ ವಿಶ್ವವಿದ್ಯಾಲಯದ ರಾಷ್ಟ್ರಿಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕಿ ಹಾಗೂ ವಿಸ್ತರಣೆ ಮತ್ತು ಔಟ್‌ರೀಚ್ ಚಟುವಟಿಕೆಗಳ ನಿರ್ದೇಶಕಿ ಡಾ. ಅಶ್ವಿನಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಕಾನೂನು ಕಾಲೇಜಿನಲ್ಲಿ ರಾಷ್ಟ್ರಿಯ ಸೇವಾ ಯೋಜನೆ ಹಾಗೂ ರೆಡ್‌ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಯೇನೆಪೋಯ ವಿಶ್ವವಿದ್ಯಾಲಯದ ರಾಷ್ಟ್ರಿಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜಕಿ ಹಾಗೂ ವಿಸ್ತರಣೆ ಮತ್ತು ಔಟ್‌ರೀಚ್ ಚಟುವಟಿಕೆಗಳ ನಿರ್ದೇಶಕಿ ಡಾ. ಅಶ್ವಿನಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕಾಲೇಜು ಅವಧಿಯಲ್ಲಿ ನೀಡಲ್ಪಡುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡರೆ, ಅದು ಜೀವನದ ದಿಕ್ಕನ್ನೇ ಬದಲಿಸಬಲ್ಲದು. ಎನ್‌ಎಸ್‌ಎಸ್‌ನಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ನಾಯಕತ್ವ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಭಾವನೆ ಬೆಳೆಸುತ್ತವೆ ಎಂದರು.
ಕೇಂದ್ರ ಸರ್ಕಾರದ ಮೇರಾ ಯುವ ಭಾರತ್ ಯೋಜನೆಯ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಅನುಭವಾತ್ಮಕ ಕಲಿಕೆಯನ್ನು ಪಡೆಯಬಹುದು. ಇವುಗಳ ಮೂಲಕ ವಿದ್ಯಾರ್ಥಿಗಳು ನೈಜ ಜಗತ್ತಿನ ಅನುಭವವನ್ನು ಪಡೆದು, ಅಗತ್ಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆಯನ್ನು ನೀಡಬಹುದು ಎಂದು ಹೇಳಿದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆವಹಿಸಿ, ಎನ್‌ಎಸ್‌ಎಸ್ ಉದ್ದೇಶ ಸಮಾಜ ನಿರ್ಮಾಣ ಹಾಗೂ ಪರಸ್ಪರ ಬೆಳವಣಿಗೆ. ಸಮಾನ ಮನಸ್ಕರು ಜೊತೆಯಾಗಿ ಶ್ರಮಿಸಿದರೆ, ಬದಲಾವಣೆಯ ಶತಸಿದ್ಧ. ಕಾರ‍್ಯಕ್ರಮದಲ್ಲಿ ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಚಾರ‍್ಯ ಡಾ.ಸುಶೀಲ್ ಶೆಟ್ಟಿ, ಕಾನೂನು ಕಾಲೇಜಿನ ಪ್ರಾಚರ‍್ಯ ಪ್ರೊ.ಮಹಾಂತೇಶ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು.
ಹರ್ಷಲ್ ನಿರೂಪಿಸಿದರು. ನಿಶಾಂತ್ ಪೂಜಾರಿ ಸ್ವಾಗತಿಸಿದರು. ನಿಶಿ ಕರ‍್ವೆ ವಂದಿಸಿದರು. ಡಾ.ಅಶ್ವಿನಿ ಶೆಟ್ಟಿ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))