ಆಳ್ವಾಸ್: ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

| Published : Nov 22 2025, 03:15 AM IST

ಆಳ್ವಾಸ್: ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಿಸಲಾಯಿತು. ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನ ಆಚರಿಸಲಾಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಸ್‌ಡಿಎಮ್ ಪ್ರಕೃತಿ ಚಿಕಿತ್ಸಾ ಕಾಲೇಜಿನ ಡೀನ್ ಡಾ. ಗೀತಾ ಬಿ. ಶೆಟ್ಟಿ ಪ್ರಕೃತಿ ಚಿಕಿತ್ಸಾ ದಿನಾಚರಣೆಯು ಕೇವಲ ಆಚರಣೆಯ ಮಟ್ಟಕ್ಕೆ ಸೀಮಿತವಾಗದೆ, ರೋಗ ನಿವಾರಣೆ ಮತ್ತು ಚಿಕಿತ್ಸೆಯ ನೆಲೆಯಲ್ಲಿ, ಸಮಾಜಕ್ಕೆ ನೈಜ ಪರಿಹಾರ ನೀಡುವಂತಾಗಬೇಕು. ಪ್ರಕೃತಿ ಚಿಕಿತ್ಸೆಯ ವೈಜ್ಞಾನಿಕ ತತ್ವಗಳನ್ನು ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸುವ ಜವಾಬ್ದಾರಿ ನಾವೆಲ್ಲದ್ದಾಗಿದೆ. ಅಲ್ಲದೆ ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ದೃಢಪಡಿಸಲು ವೈಜ್ಞಾನಿಕ ದಾಖಲೆ ಸಂಗ್ರಹಣೆ ಅತ್ಯಾವಶ್ಯಕ, ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್‌ ಫಾರ್ಮಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗ್ರೀಷ್ಮ ವಿವೇಕ್ ಆಳ್ವ ಮಾತನಾಡಿ, ಪ್ರಕೃತಿ ಚಿಕಿತ್ಸಾ ವಿದ್ಯಾರ್ಥಿಗಳು ಮತ್ತು ವೈದ್ಯರು ಆತ್ಮವಿಶ್ವಾಸ, ಸೇವಾಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ ಸ್ವಾಗತ ಕೋರಿದರು.ದ್ವಿತೀಯ ವರ್ಷದ ವಿದ್ಯಾರ್ಥಿನಿ ಫಿದಾ ಅಂಜು ಕಾರ್ಯಕ್ರಮ ನಿರೂಪಿಸಿ, ಡಾ. ಆಕಾಶ್ ವಂದಿಸಿದರು.