‘ಆಳ್ವಾಸ್ ಪ್ರಗತಿ 2023’ ಬೃಹತ್ ಉದ್ಯೋಗ ಮೇಳ ಇಂದಿನಿಂದ

| Published : Oct 06 2023, 01:21 AM IST

‘ಆಳ್ವಾಸ್ ಪ್ರಗತಿ 2023’ ಬೃಹತ್ ಉದ್ಯೋಗ ಮೇಳ ಇಂದಿನಿಂದ
Share this Article
  • FB
  • TW
  • Linkdin
  • Email

ಸಾರಾಂಶ

‘ಆಳ್ವಾಸ್ ಪ್ರಗತಿ 2023’
ಕನ್ನಡಪ್ರಭ ವಾರ್ತೆ ಮೂಡುಬಿದಿರೆ ಸುಮಾರು 13600ಕ್ಕೂ ಹೆಚ್ಚಿನ ಉದ್ಯೋಗಾವಕಾಶ, ೨೦೩ಕ್ಕೂ ಹೆಚ್ಚು ಪ್ರಸಿದ್ಧ ಬಹುರಾಷ್ಟ್ರೀಯ ಹಾಗೂ ಸ್ಥಳೀಯ ಸೇರಿದಂತೆ ವಿವಿಧ ವಲಯಗಳ ಕಂಪನಿಗಳ ಸಮಾಗಮದ ಬೃಹತ್ ಉದ್ಯೋಗ ಮೇಳವಾದ ‘ಆಳ್ವಾಸ್ ಪ್ರಗತಿ -೨೦೨೩’ ೧೩ನೇ ಆವೃತಿಗೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸಜ್ಜಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ೨೦೨೩ರ ಅಕ್ಟೋಬರ್ ೬ ಮತ್ತು ೭ರಂದು ಮೂಡುಬಿದಿರೆಯ ಆಳ್ವಾಸ್‌ವಿದ್ಯಾಗಿರಿ ಆವರಣದಲ್ಲಿ ‘ಆಳ್ವಾಸ್ ಪ್ರಗತಿ-೨೦೨೩’ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆವರಣ ಹಾಗೂ ಗ್ರಂಥಾಲಯ ಬ್ಲಾಕ್‌ನಲ್ಲಿ ಉದ್ಯೋಗ ಮೇಳದ ಸಂದರ್ಶನ, ಪರೀಕ್ಷೆ ಇತ್ಯಾದಿಗಳಿಗೆ ವ್ಯವಸ್ಥೆ ಮಾಡಲಿದ್ದು, ಉದ್ಘಾಟನೆಯು ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಅ.೬ರಂದು ಬೆಳಿಗ್ಗೆ ೯.೩೦ಕ್ಕೆ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ಯು. ರಾಜೇಶ್ ನಾಯ್ಕ್, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಹಾಗೂ ಕೆ. ಹರೀಶ್ ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಯುಎಇ ಮೂಲದ ಬುರ್ಜಿಲ್ ಹೋಲ್ಡಿಂಗ್ಸ್ನ ಮಾನವ ಸಂಪನ್ಮೂಲದ ಸಮೂಹ ಮುಖ್ಯಸ್ಥ ಡಾ. ಸಂಜಯ್‌ಕುಮಾರ್, ಅಲೆಂಬಿಕ್ ಫಾರ್ಮಾಸ್ಯುಟಿಕಲ್ಸ್ ಮಾನವ ಸಂಪನ್ಮೂಲದ ಸಹ ಉಪಾಧ್ಯಕ್ಷ ಅರವಿಂದ ತ್ರಿಪಾಠಿ, ಫ್ಯಾಕ್ಟ್ಸೆಟ್ ಸಿಸ್ಟಮ್ ಇಂಡಿಯಾ ಪ್ರೈ. ಲಿ. ಹಾಗೂ ಭಾರತ ಮತ್ತು ಫಿಲಿಫೈನ್ಸ್ ಟಾಲೆಂಟ್ ಅಕ್ವಸಿಷನ್ ಉಪಾಧ್ಯಕ್ಷರಾದ ಅನುಪ್ಮ ರಂಜನ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡುವರು. ಔದ್ಯೋಗಿಕ ಉನ್ನತೀಕರಣ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ೧೨೦ ಮಂದಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗೆ ಎಂಟು ದಿನಗಳ ಕಾಲ ಕಾರ್ಪೊರೇಟ್ ತರಬೇತಿ ನೀಡಲಾಗಿದೆ. ೨೦೦ ಮಂದಿ ಸಿಬ್ಬಂದಿ ಸೇರಿದಂತೆ ೭೦೦ ಮಂದಿ ಸ್ವಯಂ ಸೇವಕರಾಗಿ ಸಹಕರಿಸಲಿದ್ದಾರೆ. ವಿದ್ಯಾರ್ಥಿಗಳ ಅರ್ಹತೆಗೆ ಅನುಗುಣವಾಗಿ ‘ಸಪ್ತವರ್ಣ’ ವಿನ್ಯಾಸ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಗೆ ‘ಕೆಂಪು’, ಐಟಿಐಗೆ ‘ಕಿತ್ತಳೆ’, ಡಿಪ್ಲೊಮಾಗೆ ‘ಪಿಂಕ್’, ಪದವೀಧರರಿಗೆ ‘ಹಸಿರು’, ಎಂಜಿನಿಯರಿಂಗ್‌ಗೆ ‘ನೀಲಿ’, ನರ್ಸಿಂಗ್ ಮತ್ತು ಅರೆವೈದ್ಯಕೀಯಕ್ಕೆ ‘ಬಿಳಿ’, ಸ್ನಾತಕೋತ್ತರ ಪದವೀಧರರಿಗೆ ‘ಹಳದಿ’ ಬಣ್ಣವನ್ನು ನೀಡಲಾಗಿದೆ. ಈ ಬಣ್ಣದ ವ್ಯವಸ್ಥೆಯು ನಿರ್ದಿಷ್ಟ ಅರ್ಹತೆಯ ಹುದ್ದೆಗಳಿಗೆ ಆಯ್ಕೆ ಮಾಡಲು ಸಹಕಾರಿಯಾಗಲಿದೆ. ನೋಂದಣಿ ಮಾಡಿಕೊಂಡ ೮೭೩೨ ಉದ್ಯೋಗಾಂಕ್ಷಿಗಳಿಗೆ ಎಸ್ಸೆಮ್ಮೆಸ್ ಮೂಲಕ ನೋಂದಣಿ ಸಂಖ್ಯೆಯನ್ನು ಕಳುಹಿಸಿಕೊಡಲಾಗಿದೆ. ‘ಆಳ್ವಾಸ್ ಪ್ರಗತಿ ೨೦೨೩’ರಲ್ಲಿ ಪಾಲ್ಗೊಳ್ಳಲು ಹಾಗೂ ಸಿದ್ಧತಾ ಪರಿಕರಗಳನ್ನು ಪಡೆದುಕೊಳ್ಳಲು ಆನ್‌ಲೈನ್ ನೋಂದಣಿಕಡ್ಡಾಯವಾಗಿದೆ. ಪ್ರವೇಶದ ದ್ವಾರದ ಸಮೀಪವೇ ವಿದ್ಯಾರ್ಥಿಗಳಿಗೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು hಣಣಠಿ://ಚಿಟvಚಿsಠಿಡಿಚಿgಚಿಣi.ಛಿom/ಅಚಿಟಿಜiಜಚಿಣeಖegisಣಡಿಚಿಣioಟಿPಚಿge ನಲ್ಲಿ ಉಚಿತ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೦೦೮೯೦೭೭೧೬ / ೯೬೬೩೧೯೦೫೯೦ / ೭೯೭೫೨೨೩೮೬೫ / ೯೭೪೧೪೪೦೪೯೦ ಸಂಪರ್ಕಿಸಬಹುದು.