ನೃತ್ಯ ಪ್ರದರ್ಶಿಸಲಿರುವ ಆಳ್ವಾಸ್‌ ವಿದ್ಯಾರ್ಥಿಗಳು

| Published : Feb 05 2025, 12:31 AM IST

ಸಾರಾಂಶ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಆಳ್ವಾಸ್ ನುಡಿಸಿರಿ ವಿರಾಸತ್ ಎಂಬ ಸಾಂಸ್ಕೃತಿಕ ವೈಭವಕ್ಕೆ ವ್ಯಾಪಕ ಬೆಂಬಲ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಮೂಗಲಿ ಧರ್ಮಪ್ಪ ಹೇಳಿದರು. ಮುಂದಿನ ತಲೆಮಾರಿಗೆ ಕಲೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಕುಟುಂಬ ಸಹಿತ ಕಾರ್ಯಕ್ರಮ ವೀಕ್ಷಿಸುವ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಆಳ್ವಾಸ್ ನುಡಿಸಿರಿ ವಿರಾಸತ್ ಎಂಬ ಸಾಂಸ್ಕೃತಿಕ ವೈಭವಕ್ಕೆ ವ್ಯಾಪಕ ಬೆಂಬಲ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಸಮುದಾಯಗಳು ಸಹಕಾರ ನೀಡಬೇಕು ಎಂದು ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಮೂಗಲಿ ಧರ್ಮಪ್ಪ ಹೇಳಿದರು.

ಕಲೆಗಳು ನಶಿಸುತ್ತಿರುವ ಈ ಹೊತ್ತಿನಲ್ಲಿ ಸಾಂಸ್ಕೃತಿಕ ರಾಯಭಾರಿಯಾಗಿ ಕೆಲಸ ಮಾಡುವ ಮೂಲಕ ನಾಡಿನಾದ್ಯಂತ ವಿವಿಧ ಕಲೆಗಳನ್ನು ಪಸರಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪಟ್ಟಣದ ಎಪಿಎಂಸಿ ಆವರಣದಲ್ಲಿ ಫೆ. ತಿಂಗಳ ಏಳರಂದು ಶುಕ್ರವಾರ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂದು ಸಂಜೆ ೫ ಗಂಟೆಯಿಂದ ಆರಂಭವಾಗಲಿರುವ ಸಾಂಸ್ಕೃತಿಕ ವೈಭವದಲ್ಲಿ ಸುಮಾರು ೩೫೦ಕ್ಕೂ ಅಧಿಕ ವಿದ್ಯಾರ್ಥಿಗಳು ದೇಶ, ವಿದೇಶದ ನೃತ್ಯ ರೂಪಕಗಳನ್ನು ಪರಿಚಯ ಮಾಡಿಕೊಡಲಿದ್ದಾರೆ. ಆದ್ದರಿಂದ ಮುಂದಿನ ತಲೆಮಾರಿಗೆ ಕಲೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಕುಟುಂಬ ಸಹಿತ ಕಾರ್ಯಕ್ರಮ ವೀಕ್ಷಿಸುವ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಮಂಜುನಾಥ್, ಅಕ್ಕಮಹಾದೇವಿ ಮಹಿಳಾ ವೇದಿಕೆ ಅಧ್ಯಕ್ಷೆ ಕೋಮಲಾ ದಿನೇಶ್, ಯುವ ವೇದಿಕೆ ಅಧ್ಯಕ್ಷ ಮಳಲಿ ಸ್ವಾಮಿ, ಮುಖಂಡರಾದ ದಿವಾನ್, ಮಠಸಾಗರ ಶ್ರೀಧರ್, ಸಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.