ಸಾರಾಂಶ
ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್. ಸಿಂಧ್ಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಸ್ಕೌಟ್ಸ್ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ. ಪ್ರೇಮಕುಮಾರ್ ಇದ್ದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಡಿ.10ರಿಂದ 15ರ ವರೆಗೆ 6 ದಿನಗಳ ಕಾಲ ನಡೆದ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ರೇಂಜರ್ಸ್, ರೋವರ್ಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಶಿಬಿರದಲ್ಲಿ ಕೊಡಗು ಜಿಲ್ಲೆಯಿಂದ ನಾಪೋಕ್ಲು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಾಲೆಯ ಶಿಕ್ಷಕಿ ಸುಶ್ಮಿತಾ, ದಳ ನಾಯಕಿಯಾಗಿ ಭಾಗವಹಿಸಿದ್ದರು.ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ, ಈ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಈ ಸಂದರ್ಭ ಜಿಲ್ಲಾ ಸಂಸ್ಥೆಯ ಪಿಆರ್‌ಒ, ಸ್ಕೌಟ್ಸ್ ವಿಭಾಗದ ಜಿಲ್ಲಾ ಸಹಾಯಕ ಆಯುಕ್ತ ಟಿ.ಜಿ.ಪ್ರೇಮಕುಮಾರ್ ಭಾಗವಹಿಸಿದ್ದರು.
ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿವರ:ಈ ಶಿಬಿರದಲ್ಲಿ ಗೈಡ್ಸ್ ಕ್ಯಾಪ್ಟನ್ ಸುಶ್ಮಿತಾ, ಸ್ಕೌಟ್ಸ್ ವಿಭಾಗದಿಂದ ಲಿತೇಶ್, ಮನ್ವಿತ್, ಪ್ರೀತೇಶ್, ಗೌತಮ್, ಕಾರ್ತಿಕ್ ಹಾಗೂ ಗೈಡ್ಸ್ ವಿಭಾಗದಿಂದ ತೀರ್ಥ, ಅದಿತಿ, ಪ್ರಿಯನ್ಸಿ, ಅನುಶ್ರೇಯ, ವತ್ಸಲ ಭಾಗವಹಿಸಿದ್ದರು.
6 ದಿನಗಳ ಕಾಲ ನಡೆದ ಶಿಬಿರದಲ್ಲಿ ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರ, ಶಿಬಿರಾರ್ಥಿಗಳಿಗೆ ಅಡ್ವೆಂಚರ್‌ನಲ್ಲಿ ಸಾಹಸಮಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.ಈ ಶಿಬಿರದಲ್ಲಿ ಸ್ಕೌಟ್ಸ್, ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ತರಬೇತಿ ಆಯುಕ್ತರಾದ ಮೈಥಿಲಿ ರಾವ್, ರಾಜ್ಯ ಪ್ರತಿನಿಧಿ ಕಾವೇರಿ ಭೇಟಿ ನೀಡಿದ್ದರು.
ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕುರಿತ ವಿವಿಧ ಮಾಹಿತಿ ಪಡೆದ ವಿವಿಧ ಚಟುವಟಿಕೆಗಳಲ್ಲಿ ತೊಡಗಿದ್ದರು. ಶಿಬಿರದ ವೇಳೆಯಲ್ಲಿ ವಿದ್ಯಾರ್ಥಿಗಳು ಮಂಗಳೂರು ಬಳಿಯ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿದ್ದರು.