ಸಾರಾಂಶ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್‌ನಲ್ಲಿ ಸ್ವಿಚ್‌ಗೇರ್ ಆ್ಯಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಹೊಸ ಘಟಕ ಇತ್ತೀಚೆಗೆ ಉದ್ಘಾಟಿಸಲಾಯಿತು.
ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್‌ನಲ್ಲಿ ಸ್ವಿಚ್‌ಗೇರ್ ಆ್ಯಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಹೊಸ ಘಟಕ ಉದ್ಘಾಟಿಸಲಾಯಿತು.
ಘಟಕ ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಇಂತಹ ಅಂತಾರಾಷ್ಟ್ರೀಯ ಕಂಪನಿಗಳು ಕರಾವಳಿ ಭಾಗದಲ್ಲಿ ಸ್ಥಾಪನೆಯಾಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳು ದೊರೆತು, ಅವರ ಪ್ರತಿಭೆಗೆ ಪೂರಕ ಪ್ರೋತ್ಸಾಹ ದೊರೆಯಲಿದೆ ಎಂದರು.ಪ್ರಸ್ತುತ ಆಳ್ವಾಸ್ ಟೆಕ್ ಪಾರ್ಕ್ನಲ್ಲಿ 8 ಕಾರ್ಪೊರೇಟ್ ಕಂಪನಿಗಳು, 4 ಸ್ಟಾರ್ಟ್ಅಪ್‌ಗಳು ಮತ್ತು 2 ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ 75 ವಿದ್ಯಾರ್ಥಿಗಳು ತಮ್ಮ 12 ಹೊಸ ಸ್ಟಾರ್ಟ್ಅಪ್ ಆಲೋಚನೆಗಳನ್ನು ಕಾರ್ಯಗತಗೊಳಿಸಲು ಸಕ್ರಿಯ ತರಬೇತಿ ಪಡೆಯುತ್ತಿದ್ದಾರೆ. ಉದ್ಯಮಶೀಲತೆ ಬೆಳೆಸುವ ಉದ್ದೇಶದಿಂದ ಟೈ ಸಿಐಐ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ ಎಂದರು.ಹರ್ಷಿತ್ ಶೆಟ್ಟಿ ಮಾತನಾಡಿ, ನಮ್ಮ ಕಂಪನಿ 2004ರಲ್ಲಿ ಸ್ಥಾಪನೆಯಾದ ಭಾರತೀಯ ಸಂಸ್ಥೆಯಾಗಿದ್ದು, ಲೋ ಮತ್ತು ಮಿಡಿಯಂ ವೋಲ್ಟೇಜ್ ಸ್ವಿಚ್‌ಬೋರ್ಡ್‌ಗಳು, ಬಸ್‌ವೇ ವ್ಯವಸ್ಥೆಗಳು ಹಾಗೂ ಶೀಟ್ ಮೆಟಲ್ ಎನ್‌ಕ್ಲೋಸರ್ ತಯಾರಿಕೆಯಲ್ಲಿ ಪರಿಣತಿ ಹೊಂದಿದೆ. ವಿದ್ಯುತ್ ವಿತರಣೆ, ಶಕ್ತಿ ನಿರ್ವಹಣೆ ಮತ್ತು ಕೈಗಾರಿಕಾ ಸ್ವಯಂಚಾಲಿತ ಪರಿಹಾರಗಳಲ್ಲಿ ಕಂಪನಿಯು ಸಮಗ್ರ ಸೇವೆಗಳನ್ನು ನೀಡುತ್ತಿದೆ ಎಂದು ತಿಳಿಸಿದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದ ಹರ್ಷಿತ್ ಶೆಟ್ಟಿ, ತನ್ನ ಇಂದಿನ ಸಾಧನೆಗೆ ಡಾ. ಎಂ. ಮೋಹನ ಆಳ್ವರಿಂದ ಕಲಿತ ಸಮಯಪಾಲನೆ, ಶಿಸ್ತು ಮತ್ತು ಪರಿಶ್ರಮವೇ ಮೂಲಾಧಾರ ಎಂದರು.ಎಂಜಿನಿಯರಿಂಗ್ ಕಾಲೇಜಿನ ಪ್ರಾಚರ‍್ಯ ಡಾ ಪೀಟರ್ ಫರ್ನಾಂಡೀಸ್ , ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉದ್ಯಮಶೀಲಾ ಅಭಿವೃದ್ಧಿ ಕೋಶದ ಮುಖ್ಯಸ್ಥ ವೇಣುರಾವ್ ದೇವ್, ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಕುಮಾರಸ್ವಾಮಿ ಹಾಗೂ ಶ್ರೀನಿವಾಸ ಇದ್ದರು.