ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೆಪ್ಟೆಂಬರ್ 4ರಂದು ಅದ್ಧೂರಿಯಾಗಿ ನಡೆಯಲಿರುವ ಉದ್ಭವಲಿಂಗ ಅಮರೇಶ್ವರ ದಹಿಹಂಡಿ ಉತ್ಸವದ ಅಂಗವಾಗಿ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಶುಕ್ರವಾರ ಅಮರೇಶ್ವರ ದೇವಸ್ಥಾನದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಔರಾದ್
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೆಪ್ಟೆಂಬರ್ 4ರಂದು ಅದ್ಧೂರಿಯಾಗಿ ನಡೆಯಲಿರುವ ಉದ್ಭವಲಿಂಗ ಅಮರೇಶ್ವರ ದಹಿಹಂಡಿ ಉತ್ಸವದ ಅಂಗವಾಗಿ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಶುಕ್ರವಾರ ಅಮರೇಶ್ವರ ದೇವಸ್ಥಾನದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪ್ರಚಾರ ರಥಕ್ಕೆ ಚಾಲನೆ ನೀಡಲಾಗಿದ್ದು, ರಥವು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಂಚರಿಸಿ ದಹಿಹಂಡಿ ಉತ್ಸವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ.
ಶಾಸಕ ಪ್ರಭು ಬಿ. ಚವ್ಹಾಣ ಅವರ ಸಾರಥ್ಯದಲ್ಲಿ ದಹಿಹಂಡಿ ಉತ್ಸವವು ಪ್ರತಿವರ್ಷ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ನಡೆಯುತ್ತಿದ್ದು, ಈ ಬಾರಿಯೂ ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.ಉತ್ಸವವನ್ನು ಯಶಸ್ವಿಗೊಳಿಸಲು ಭಕ್ತರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಪ್ರಚಾರ ಸಮಿತಿ ಪ್ರಮುಖ ಆನಂದ ಪಿ. ದ್ಯಾಡೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ಶ್ರೀನಿವಾಸ ಖೂಬಾ, ದಯಾನಂದ ಘೂಳೆ, ರಾಜಕುಮಾರ ಪಟ್ನೆ, ಪ್ರಕಾಶ ಔರಾದಕರ, ಸಂತೋಷ ಫುಲಾರಿ, ಸಚಿನ ಹವರಗೆ, ಯಾದುರಾವ ಮೇತ್ರೆ, ವಿಶಾಲ ಪಾಟೀಲ, ರಾಜಪ್ಪ ಮೈಲಾರೆ, ಲಕ್ಷ್ಮಣ ರಾಠೋಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.