ಅಂಬಲಪಾಡಿ: ಭಜನಾ ಮಂಗಲೋತ್ಸವ ಸಂಪನ್ನ

| Published : Feb 08 2025, 12:32 AM IST

ಸಾರಾಂಶ

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವ ದಯಾಕರ ಶಾಂತಿ ಬನ್ನಂಜೆ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಉಡುಪಿ

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವ ದಯಾಕರ ಶಾಂತಿ ಬನ್ನಂಜೆ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು.ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಸಂಘ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಮತ್ತು ಪಠೇಲರ ಮನೆ ಜಯಕರ ಶೆಟ್ಟಿ ಅಂಬಲಪಾಡಿ, ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಭಜನಾ ಸಂಚಾಲಕರಾದ ಕೆ.ಮಂಜಪ್ಪ ಸುವರ್ಣ ಮತ್ತು ವಿದುಷಿ ಉಷಾ ಹೆಬ್ಬಾರ್ ಮಣಿಪಾಲ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಂ. ಸುವರ್ಣ, ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಘದ ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ ಎ., ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್, ಭಾಸ್ಕರ ಕೋಟ್ಯಾನ್, ಗುರುರಾಜ್ ಪೂಜಾರಿ, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಚೆನ್ನಕೇಶವ, ವಿನೋದ್ ಪೂಜಾರಿ, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್, ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್, ಜೊತೆ ಕಾರ್ಯದರ್ಶಿಗಳಾದ ಅಶ್ವಿನಿ ಪೂಜಾರಿ, ಲಾವಣ್ಯ, ಕೋಶಾಧಿಕಾರಿ ಸವಿತಾ ಸಂತೋಷ್, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ್, ಸಹ ಸಂಘಟನಾ ಕಾರ್ಯದರ್ಶಿ ಸಂಚಲ ಶಶಿಕಾಂತ್ ಹಾಗೂ ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸದಸ್ಯೆಯರು, ಯುವ ಕಾರ್ಯಕರ್ತರು, ಸಂಘದ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ಭಜನಾ ಸಪ್ತಾಹ ಮತ್ತು 65ನೇ ಭಜನಾ ಮಂಗಲೋತ್ಸವದಲ್ಲಿ ಉಡುಪಿ ತಾಲೂಕಿನ 20 ಭಜನಾ ಮಂಡಳಿಗಳಿಂದ ಭಜನೆ ಹಾಗೂ ಕುಣಿತದ ಭಜನಾ ಸೇವೆ ನಡೆಯಿತು. ಸಂಘದ ಭಜನಾ ಮಂಡಳಿ, ಮಹಿಳಾ ಘಟಕ ಮತ್ತು ಶ್ರೀ ಗುರು ಕುಣಿತ ಭಜನಾ ಮಂಡಳಿಯಿಂದ ನಗರ ಭಜನೆ ನಡೆಯಿತು.