ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಅಂಬೇಡ್ಕರ್, ಬಾಬೂಜಿ: ಚಲುವರಾಯಸ್ವಾಮಿ

| Published : Apr 15 2025, 12:55 AM IST

ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಅಂಬೇಡ್ಕರ್, ಬಾಬೂಜಿ: ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಂ ಅವರ ಜೀವನ ಚರಿತ್ರೆ ಕುರಿತು ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಮೋಹನ್‌ಕುಮಾರ್ ಪ್ರಧಾನ ಭಾಷಣ ಮಾಡಿದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಡಾ.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಂ ದೇಶಕಂಡ ಅಪರೂಪದ ವ್ಯಕ್ತಿಗಳು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬಣ್ಣಿಸಿದರು.

ಪಟ್ಟಣದ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ರಾಂ ಜಯಂತ್ಯುತ್ಸದಲ್ಲಿ ಇಬ್ಬರೂ ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಶೋಷಿತ ವರ್ಗಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದರೆ ದೇಶ ಉತ್ತಮ ರೀತಿಯಲ್ಲಿ ಆಡಳಿತ ನಡೆಸಲು ಸಂವಿಧಾನವನ್ನು ಕೊಟ್ಟಿದ್ದಾರೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಂ ಅವರ ಜೀವನ ಚರಿತ್ರೆ ಕುರಿತು ರಾಜ್ಯ ಉಚ್ಛ ನ್ಯಾಯಾಲಯದ ವಕೀಲ ಮೋಹನ್‌ಕುಮಾರ್ ಪ್ರಧಾನ ಭಾಷಣ ಮಾಡಿದರು. ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಿ ಗೌರವಿಸಲಾಯಿತು. ಪೌರಕಾರ್ಮಿಕರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಮುದಾಯದ ಸಾಧಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ತಾಲೂಕು ಆಡಳಿತ ಸೌಧದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗಳಿಗೆ ಸಚಿವರು ಹಾರ ಹಾಕಿ ಗೌರವ ನಮನ ಸಲ್ಲಿಸಿದರು. ಪಟ್ಟಣದ ಟಿ.ಬಿ.ಬಡಾವಣೆ ಬಿಜಿಎಸ್ ವೃತ್ತದಿಂದ ತಾಲೂಕು ಆಡಳಿತ ಸೌಧದವರೆಗೆ ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಂ ಅವರ ಭಾವಚಿತ್ರಗಳನ್ನು ಬೆಳ್ಳಿ ಮಾದರಿ ಸಾರೋಟಿನಲ್ಲಿರಿಸಿ ಪೂರ್ಣಕುಂಭಸ್ವಾಗತ, ಡೊಳ್ಳು ಕುಣಿತ, ವೀರಗಾಸೆ ಕುಣಿತದೊಂದಿಗೆ ಮೆರವಣಿಗೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಅಲಿ ಅನ್ಸರ್ ಪಾಷ, ಬೆಳ್ಳೂರು ಪಪಂ ಅಧ್ಯಕ್ಷೆ ಲಕ್ಷ್ಮಮ್ಮ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮಾಜಿ ಅದ್ಯಕ್ಷ ಎಚ್.ಟಿ.ಕೃಷ್ಣೇಗೌಡ, ವಕೀಲ ಚಂದ್ರಶೇಖರ್, ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಓ ಸತೀಶ್, ಡಿವೈಎಸ್ಪಿ ಬಿ.ಚಲುವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್, ಸಿಡಿಪಿಓ ಕೃಷ್ಣಮೂರ್ತಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ಜಿಪಂ ಮಾಜಿ ಅಧ್ಯಕ್ಷ ಶಿವಣ್ಣ, ಪುರಸಭೆ ಸದಸ್ಯ ತಿಮ್ಮಪ್ಪ, ಮುಖಂಡರಾದ ಬೆಳ್ಳೂರು ಶಿವಣ್ಣ, ಎಂ.ನಾಗರಾಜಯ್ಯ, ಪದ್ಮನಾಭ (ಪಾಪಣ್ಣ) ಬಿ.ಜೆ.ನಾಗರಾಜು, ಎಚ್.ಡಿ.ಪ್ರಸನ್ನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.