₹10 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ

| Published : Mar 17 2025, 12:34 AM IST

ಸಾರಾಂಶ

ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 10 ಕೋಟಿ ಯೋಜನೆ ರೂಪಿಸಲಾಗಿದ್ದು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ 50 ಲಕ್ಷ, ಲೋಕಸಭಾ ಸದಸ್ಯ ಮಲ್ಲೇಶ್ ಬಾಬು 50 ಲಕ್ಷ, ಎಂಎಲ್ ಸಿ ಇಂಚರ ಗೋವಿಂದರಾಜು 50 ಲಕ್ಷ, ಶಾಸಕರ ಅನುದಾನದಲ್ಲಿ 50 ಲಕ್ಷ ನೀಡಲಿದ್ದೇವೆ. ಈಗಾಗಲೇ ನಿರ್ಮಿತಿ ಕೇಂದ್ರದಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಾಲ್ಕು ಕೋಟಿ ಹಣ ಮೀಸಲಿಡಲಾಗಿದೆ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ತಮ್ಮ ಅಧಿಕಾರಾವಧಿಯಲ್ಲಿ ನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭವನ ಕಟ್ಟುವುದು ನೂರರಷ್ಟು ಸತ್ಯ. ಏ.14 ರಂದು ನಡೆಯುವ ಅಂಬೇಡ್ಕರ್ ಜಯಂತಿಗೆ ಯಾವುದೇ ಪಕ್ಷಭೇದ ಇಲ್ಲದೆ ಎಲ್ಲರೂ ಬಂದು ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಿ ಎಂದು ಶಾಸಕ ಬಿ.ಎನ್.ರವಿಕುಮಾರ್ ಕೋರಿದರು.

ನಗರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಮತ್ತು ಜಗಜೀವನ್ ರಾಮ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಬಾಬು ಜಗಜೀವನ್ ರಾಮ್ ಭವನ ನಿರ್ಮಾಣ ಮಾಡಲು ಸೂಕ್ತವಾದ ಒಂದು ಎಕರೆ ಜಮೀನನ್ನು ಕೊಡಿಸುವ ಭರವಸೆ ನೀಡಿದರು. ₹10 ಕೋಟಿ ರು.ಗಳ ಯೋಜನೆ

ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 10 ಕೋಟಿ ಯೋಜನೆ ರೂಪಿಸಲಾಗಿದ್ದು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ 50 ಲಕ್ಷ, ಲೋಕಸಭಾ ಸದಸ್ಯ ಮಲ್ಲೇಶ್ ಬಾಬು 50 ಲಕ್ಷ, ಎಂಎಲ್ ಸಿ ಇಂಚರ ಗೋವಿಂದರಾಜು 50 ಲಕ್ಷ, ಶಾಸಕರ ಅನುದಾನದಲ್ಲಿ 50 ಲಕ್ಷ ನೀಡಲಿದ್ದೇವೆ. ಈಗಾಗಲೇ ನಿರ್ಮಿತಿ ಕೇಂದ್ರದಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಾಲ್ಕು ಕೋಟಿ ಹಣ ಮೀಸಲಿಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಇಓ ಹೇಮಾವತಿ , ಸರ್ಕಲ್ ಇನ್ಸ್‌ಪೆಕ್ಟರ್‌ ಎಂ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ. ಎನ್ ಸುಬ್ಬಾರೆಡ್ಡಿ, ವಕೀಲರಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಮೇಲೂರು ಮಂಜುನಾಥ್, ಬಂಕ್ ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.